ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
05:01 PM May 12, 2024 IST | Ashitha S

ಅಮೆರಿಕ: ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

Advertisement

ಕಳೆದ ಎರಡು ತಿಂಗಳ ಹಿಂದೆ ಇವರು ಅಮೆರಿಕದ Massachusetts General Hospital ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಎರಡು ತಿಂಗಳ ಹಿಂದೆ ಅವರಿಗೆ ಹಂದಿ ಕಿಡ್ನಿ ಕಸಿ ಮಾಡಲಾಗಿತ್ತು. ಅವರ ದಿಢೀರ್​ ಸಾವಿಗೆ ಕಾರಣ ಇನ್ನು ತಿಳಿದುಬಂದಿಲ್ಲ. ಆದರೆ ಕಿಡ್ನಿ ಕಸಿಗೆ ಸಂಬಂಧಿಸಿ ಅವರು ಸಾವನ್ನಪ್ಪಿಲ್ಲ ಎಂದು ವರದಿಗಳು ಹೇಳಿವೆ.

ರಿಚರ್ಡ್​ ಅಮೆರಿಕದ ವೇಮೌತ್​ ನಿವಾಸಿ ಆಗಿದ್ದರು. ಇವರು ಕಿಡ್ನಿ ಕಸಿಗೆ ಒಳಗಾಗುವುದಕ್ಕೂ ಮೊದಲು ಟೈಪ್ 2 ಡಯಾಬಿಟಿಸ್​ನಿಂದ ಬಳಲುತ್ತಿದ್ದರು. ನಂತರ ಕಿಡ್ನಿ ಸಮ್ಯಸೆಗೆ ಒಳಗಾಗಿದ್ದರು. ರಕ್ತದೊತ್ತಡ ಸೇರಿದಂತೆ ಅನೇಕ ಆರೋಗ್ಯದ ಸಮಸ್ಯೆ ಎದುರಿಸುತ್ತಿದ್ದ ಇವರು ಹಲವು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಪರಿಣಾಮ 2018ರಲ್ಲಿ ಮಾನವ ಕಿಡ್ನಿ ಕಸಿಗೂ ಒಳಗಾಗಿದ್ದರು. ಅದು ಸುಮಾರು ಐದು ವರ್ಷಗಳ ಕಾಲ ಕಾರ್ಯನಿರ್ವಹಿಸಿತ್ತು. 2023ರಲ್ಲಿ ಮತ್ತೆ ಕಿಡ್ನಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಹಂದಿ ಕಿಡ್ನಿ ಕಸಿ ಮಾಡಲಾಗಿತ್ತು.

Advertisement

Advertisement
Tags :
deathindiaKARNATAKApig kidneyRichardtransplant
Advertisement
Next Article