For the best experience, open
https://m.newskannada.com
on your mobile browser.
Advertisement

ರಾಗಿಣಿ ದ್ವಿವೇದಿ ನಟನೆಯ ‘ಇಮೇಲ್’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ

ರಾಗಿಣಿ ದ್ವಿವೇದಿ ನಟಿಸಿರುವ  ಸಿನಿಮಾ ‘ಇಮೇಲ್’ನ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಗ್ಲಾಮರಸ್ ಚೆಲುವೆ ರಾಗಿಣಿ ದ್ವಿವೇದಿ, ‘ಇಮೇಲ್’ ಸಿನಿಮಾದಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ.
09:11 PM Jan 06, 2024 IST | Ashika S
ರಾಗಿಣಿ ದ್ವಿವೇದಿ ನಟನೆಯ ‘ಇಮೇಲ್’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ

ಬೆಂಗಳೂರು : ರಾಗಿಣಿ ದ್ವಿವೇದಿ ನಟಿಸಿರುವ  ಸಿನಿಮಾ ‘ಇಮೇಲ್’ನ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಗ್ಲಾಮರಸ್ ಚೆಲುವೆ ರಾಗಿಣಿ ದ್ವಿವೇದಿ, ‘ಇಮೇಲ್’ ಸಿನಿಮಾದಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ.

Advertisement

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ‘ಇಮೇಲ್’ ಮಹಿಳಾ ಪ್ರಧಾನ ಸಿನಿಮಾ ಆಗಿದೆ.

ಎಸ್ ಆರ್ ಫಿಲಂ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು ಎಸ್ ಆರ್ ರಾಜನ್ ಅವರು ‘ಇಮೇಲ್’ ಸಿನಿಮಾವನ್ನು ನಿರ್ಮಿಸುವ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಮಾಸ್ ಮಾದ , ಬೀರ್ ಮಾಸ್ಟರ್ ಹಾಗೂ ಫಯಾಸ್ ಖಾನ್ ಸಾಹಸ ನಿರ್ದೇಶನ ಹಾಗೂ ಸೆಲ್ವಂ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಕನ್ನಡದ ಹಾಡುಗಳನ್ನು ಸಂತೋಷ್ ನಾಯಕ್ ಬರೆದಿದ್ದಾರೆ.

Advertisement

ಮುರುಗ ಅಶೋಕ್, ಮನೋಬಲ, ‘ಜೈಲರ್’ ಚಿತ್ರದ ಖ್ಯಾತಿಯ ಬಿಲ್ಲಿ, “ಲೊಳ್ಳುಸಭಾ” ಮನೋಹರ್, ಅಕ್ಷಯ್ ರಾಜ್, ಅರತಿ ಶ್ರೀ, ಆದವ ಬಾಲಾಜಿ, ಮಂಜು ನಂಜನಗೂಡು, ರಾಮ್ ಸನ್ನಿ, ನಯನ ಚೌಹಾನ್, ಶೈಲಜ, ಶ್ವೇತ, ತೇಜಸ್ವಿನಿ, ಕುಮಾರಿ ಸೃಷ್ಟಿ, ಕುಮಾರಿ ಸಿಂಚನ, ಕುಮಾರಿ ಅನನ್ಯ, ಮುಂತಾದವರು “ಇಮೇಲ್” ಚಿತ್ರದ ತಾರಾಬಳಗದಲ್ಲಿದ್ದಾರೆ.

ಕರ್ನಾಟಕ, ತಮಿಳುನಾಡು, ಪಾಂಡಿಚೇರಿ, ಗೋವಾ ಹಾಗೂ ಮುಂಬೈನಲ್ಲಿ ಚಿತ್ರೀಕರಣ ನಡೆದಿದೆ. “ಇಮೇಲ್” ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಸದ್ಯದಲ್ಲೇ ಎರಡು ಭಾಷೆಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

Advertisement
Tags :
Advertisement