For the best experience, open
https://m.newskannada.com
on your mobile browser.
Advertisement

’S/o ಮುತ್ತಣ್ಣ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ

ಯಂಗ್ ಡೈನಾಮಿಕ್ ಪ್ರಣಮ್ ದೇವರಾಜ್  ನಟನೆಯ ‌’S/o ಮುತ್ತಣ್ಣ’ ಸಿನಿಮಾದ ಫಸ್ಟ್ ಲುಕ್ ಪ್ರಣಮ್ ಹುಟ್ಟುಹಬ್ಬದಂದು ವಿಶೇಷವಾಗಿ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡ ಶುಭ ಕೋರಿದೆ.
06:08 PM Jan 29, 2024 IST | Ashika S
’s o ಮುತ್ತಣ್ಣ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ

ಬೆಂಗಳೂರು: ಯಂಗ್ ಡೈನಾಮಿಕ್ ಪ್ರಣಮ್ ದೇವರಾಜ್  ನಟನೆಯ ‌’S/o ಮುತ್ತಣ್ಣ’ ಸಿನಿಮಾದ ಫಸ್ಟ್ ಲುಕ್ ಪ್ರಣಮ್ ಹುಟ್ಟುಹಬ್ಬದಂದು ವಿಶೇಷವಾಗಿ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡ ಶುಭ ಕೋರಿದೆ.

Advertisement

ಬೆಂಗಳೂರಿನ ಜಿಟಿ ಮಾಲ್‌ನಲ್ಲಿ ಯಂಗ್ ಡೈನಾಮಿಕ್ ಪ್ರಣಮ್ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿ, S/o ಮುತ್ತಣ್ಣ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ.

ಶ್ರೀಕಾಂತ್ ಹುಣಸೂರು ನಿರ್ದೇಶಿಸುತ್ತಿರುವ ‘S/o ಮುತ್ತಣ್ಣ’ ಸಿನಿಮಾದಲ್ಲಿ ಪ್ರಣಮ್ ದೇವರಾಜ್ ನಾಯಕನಾಗಿ ನಟಿಸುತ್ತಿದ್ದು, ಖುಷಿ ರವಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ಮುಂತಾದವರ ತಾರಾಬಳಗವಿದೆ.

Advertisement

ಪುರಾತನ ಫಿಲಂಸ್ ಬ್ಯಾನರ್ ನಡಿ ಎಸ್ ಆರ್ ಕೆ ಫಿಲ್ಮಂಸ್ ಸಹಕಾರದೊಂದಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಕೃಷ್ಣ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ನಾಯಕ ಪ್ರಣಮ್ ದೇವರಾಜ್ ಮಾತನಾಡಿ, S/o ಮುತ್ತಣ್ಣ ಶ್ರೀಕಾಂತ್ ಸರ್ ಫಸ್ಟ್ ಟೈಮ್ ಮನೆಗೆ ಬಂದಾಗ ಅವರು ಮಾತನಾಡಿದ ರೀತಿ ಕಥೆ ಹೇಳಿದ ರೀತಿಯಲ್ಲಿ ನಂಬಿಕೆ ಬಂತು. ಪ್ರಾಮಿಸ್ ಮಾಡಿದಕ್ಕಿಂತ ಸಖತ್ ಆಗಿ ಸಿನಿಮಾ ತೆಗೆದಿದ್ದಾರೆ. ಖುಷಿ ರವಿ  ಅವರು ಎಂಥ ನಟಿ ಅನ್ನೋದು ‘ದಿಯಾ’ದಿಂದ  ಗೊತ್ತಾಗಿದೆ. ಅವರ ಜೊತೆ ಕೆಲಸ ಮಾಡಿದ್ದು, ಖುಷಿ ಕೊಟ್ಟಿದೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಂದು ತಿಳಿಸಿದರು.

ನಿರ್ದೇಶಕ ಶ್ರೀಕಾಂತ್ ಮಾತನಾಡಿ, ದೇವರಾಜ್ ಸರ್ ಕಥೆ ಹೇಳಲು ಹೋದಾಗ ಎಲ್ಲಿ ಕೆಲಸ ಮಾಡಿದ್ದೀಯಾ. ನಿನ್ನ ಪ್ರೊಫೈಲ್ ಕೊಡು ಹೀಗೆ ಒಂದು ಮಾತು ಹೇಳದೆ ನಾನು ಹೇಳಿದ ಕಥೆಗೆ ಏನ್ ಮಾಡುತ್ತೀರಾ ಮಾಡಿ ಎಂದು ಬೆಂಬಲ ಕೊಟ್ಟರು. ಟೈಟಲ್ ಹೇಳುವಂತೆ ಇದು ಅಪ್ಪ-ಮಗನ ಬಾಂಧವ್ಯದ ಕಥೆ. ಸದ್ಯ ವಾರಣಾಸಿ ಭಾಗದ ಶೂಟಿಂಗ್ ಮುಗಿಸಿಕೊಂಡು ಬಂದಿದ್ದೇವೆ. ಸಾಂಗ್ ಬಾಕಿ ಇದೆ. ಪಾಂಡಿಚೆರಿಯಲ್ಲಿ ಶೂಟ್ ಮಾಡಲು ಯೋಜನೆ ಹಾಕಿಕೊಂಡಿದ್ದೇವೆ ಎಂದು ತಿಳಿಸಿದರು.

Advertisement
Tags :
Advertisement