For the best experience, open
https://m.newskannada.com
on your mobile browser.
Advertisement

ಮಲ್ಪೆ: ಮೀನುಗಾರಿಕಾ ಬೋಟ್ ಅಪಹರಣ ಪ್ರಕರಣ- 7 ಮಂದಿಯ ಬಂಧನ

ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಬೋಟನ್ನು ಸಮುದ್ರದ ಮಧ್ಯೆ ಮೀನುಗಾರರ ಸಹಿತ ಅಪಹರಿಸಿ ಲಕ್ಷಾಂತರ ರೂ. ಮೌಲ್ಯದ ಮೀನು ಹಾಗೂ ಡಿಸೇಲ್ ಲೂಟಿ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ಭಟ್ಕಳದ 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
11:19 AM Mar 02, 2024 IST | Gayathri SG
ಮಲ್ಪೆ  ಮೀನುಗಾರಿಕಾ ಬೋಟ್ ಅಪಹರಣ ಪ್ರಕರಣ  7 ಮಂದಿಯ ಬಂಧನ

ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಬೋಟನ್ನು ಸಮುದ್ರದ ಮಧ್ಯೆ ಮೀನುಗಾರರ ಸಹಿತ ಅಪಹರಿಸಿ ಲಕ್ಷಾಂತರ ರೂ. ಮೌಲ್ಯದ ಮೀನು ಹಾಗೂ ಡಿಸೇಲ್ ಲೂಟಿ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ಭಟ್ಕಳದ 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

Advertisement

ಬಂಧಿತ ಆರೋಪಿಗಳನ್ನು ಭಟ್ಕಳದ ಸುಬ್ರಹ್ಮಣ್ಯ ಖಾರ್ವಿ (34), ರಾಘವೇಂದ್ರ ಖಾರ್ವಿ (38), ಹರೀಶ್ ನಾರಾಯಣ ಖಾರ್ವಿ (40), ನಾಗೇಶ್ ನಾರಾಯಣ (42), ಬಂದರು ಸಮೀಪದ ಬೆಳ್ಳಿಯ ಗೋಪಾಲ ಮಾದವ್ (38), ಭಟ್ಕಳದ ಸಂತೋಷ ದೇವಯ್ಯ (43) ಹಾಗೂ ಲಕ್ಷ್ಮಣ್ (50) ಎಂದು ಗುರುತಿಸಲಾಗಿದೆ.

ಮಲ್ಪೆಯಲ್ಲಿ ಪ್ರಕರಣ ದಾಖಲಾದ ತಕ್ಷಣ ಭಟ್ಕಳಕ್ಕೆ ತೆರಳಿದ್ದ ಮಲ್ಪೆ ಪೊಲೀಸರು, ಅಪಹರಿಸಲ್ಪಟ್ಟ ಬೋಟು ಮತ್ತು ಮೀನುಗಾರರನ್ನು ಪತ್ತೆ ಹಚ್ಚಿದ್ದು, ಇದೀಗ ಏಳು ಮಂದಿ ಆರೋಪಿಗಳನ್ನು ಬಂಧಿಸಿ ಮಲ್ಪೆಗೆ ಕರೆ ತಂದಿದ್ದಾರೆ.

Advertisement

Advertisement
Tags :
Advertisement