ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಟೀ ಅಂಗಡಿಗೆ ಟ್ರಕ್‌ ನುಗ್ಗಿಸಿದ ಚಾಲಕ: ಐವರ ದುರ್ಮರಣ

ತಮಿಳುನಾಡಿನಲ್ಲಿ ಘೋರ ದುರಂತವೊಂದು ನಡೆದುಹೋಗಿದೆ. ಚಾಲಕನೊಬ್ಬ ನಿದ್ದೆ ಮಂಪರಿನಲ್ಲಿ ಟೀ ಅಂಗಡಿಯೊಳಗೆ ಟ್ರಕ್‌ ನುಗ್ಗಿಸಿದ ಪರಿಣಾಮ ಐವರು ದಾರುಣವಾಗಿ ಮೃತಪಟ್ಟ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ.
01:51 PM Dec 30, 2023 IST | Ashika S

ಚೆನ್ನೈ: ತಮಿಳುನಾಡಿನಲ್ಲಿ ಘೋರ ದುರಂತವೊಂದು ನಡೆದುಹೋಗಿದೆ. ಚಾಲಕನೊಬ್ಬ ನಿದ್ದೆ ಮಂಪರಿನಲ್ಲಿ ಟೀ ಅಂಗಡಿಯೊಳಗೆ ಟ್ರಕ್‌ ನುಗ್ಗಿಸಿದ ಪರಿಣಾಮ ಐವರು ದಾರುಣವಾಗಿ ಮೃತಪಟ್ಟ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ.

Advertisement

ಇಂದು ಮುಂಜಾನೆ ನಡೆದ ಅವಘಡದಲ್ಲಿ 19 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಿಮೆಂಟ್‌ ತುಂಬಿದ ಟ್ರಕ್ ಅರಿಯಲೂರಿನಿಂದ ಶಿವಗಂಗೈಗೆ ತೆರಳುತ್ತಿತ್ತು. ಹೀಗೆ ಹೋಗುತ್ತಿದ್ದ ಸಂದರ್ಭದ ಚಾಲಕನಿಗೆ ನಿದ್ದೆ ಬಂದಿದ್ದು, ಪರಿಣಾಮ ಟ್ರಕ್‌ ಚಾಲಕನಿಂದ ನಿಯಂತ್ರಣ ಕಳೆದುಕೊಂಡು ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಟೀ ಅಂಗಡಿಗೆ ನುಗ್ಗಿದೆ.

ಇತ್ತ ಟೀ ಅಂಗಡಿಯಲ್ಲಿ ಶಬರಿಮಲೆ ಯಾತ್ರಾರ್ಥಿಗಳು ಟೀ ಕುಡಿಯುತ್ತಿದ್ದರು. ಈ ವೇಳೆ ಟ್ರಕ್‌ ಏಕಾಏಕಿ ನುಗ್ಗಿದೆ. ಅಪಘಾತದಿಂದ ಟೀ ಅಂಗಡಿ ಬಳಿ ನಿಲ್ಲಿಸಿದ್ದ ಕಾರು ಹಾಗೂ ಇತರೆ ದ್ವಿಚಕ್ರ ವಾಹನಗಳಿಗೂ ಹಾನಿಯಾಗಿದೆ.

Advertisement

Advertisement
Tags :
LatestNewsNewsKannadaಘೋರ ದುರಂತಚಾಲಕಟೀ ಅಂಗಡಿಟ್ರಕ್ನಿದ್ದೆ ಮಂಪರಿನಲ್ಲಿ
Advertisement
Next Article