ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿಹಾರದಲ್ಲಿ ಅಕ್ರಮ ಮದ್ಯ ದುರಂತ: ಐವರು ಸಾವು

ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯಲ್ಲಿ ಸಂಭವಿಸಿದ ಅಕ್ರಮ ಮದ್ಯಸೇವನೆಯಿಂದ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ನಾಲ್ವರ ಮೃತದೇಹಗಳನ್ನು ಅವರ ಕುಟುಂಬಗಳು ಈಗಾಗಲೇ ಅಂತ್ಯಸಂಸ್ಕಾರ ಮಾಡಿದ್ದು, ಒಬ್ಬರ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕಳುಹಿಸಲಾಗಿದೆ.
08:35 PM Nov 20, 2023 IST | Ashika S

ಪಾಟ್ನಾ: ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯಲ್ಲಿ ಸಂಭವಿಸಿದ ಅಕ್ರಮ ಮದ್ಯಸೇವನೆಯಿಂದ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ನಾಲ್ವರ ಮೃತದೇಹಗಳನ್ನು ಅವರ ಕುಟುಂಬಗಳು ಈಗಾಗಲೇ ಅಂತ್ಯಸಂಸ್ಕಾರ ಮಾಡಿದ್ದು, ಒಬ್ಬರ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕಳುಹಿಸಲಾಗಿದೆ.

Advertisement

ಜಿಲ್ಲೆಯ ಬೈಕುಂತ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಹ್ರಂಪುರ, ಸಿರ್ಸಾ, ಮಾನ್‌ಪುರ್ ಮತ್ತು ಬಾಮೊ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಸುರೇಶ್ ರಾಮ್, ಟಿಂಕು ರಾಮ್, ರೋಹಿತ್ ಶರ್ಮಾ, ಜಗ್ದು ರಾಯ್ ಮತ್ತು ಸಿಕಂದರ್ ಶಾ ಎಂದು ಗುರುತಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ನವಲ್ ಕಿಶೋರ್ ''ಮೃತರು ಬೇರೆ ಬೇರೆ ಗ್ರಾಮಗಳವರಾಗಿದ್ದು, ಬೇರೆ ಬೇರೆ ಕಾರಣಗಳಿಂದ ಸಾವನ್ನಪ್ಪಿದ್ದಾರೆ. ಅವರಲ್ಲಿ ಒಬ್ಬರು ಪುಣೆಯಲ್ಲಿ ವಾಸವಿದ್ದು, ಇತ್ತೀಚೆಗೆ ಮನೆಗೆ ಬಂದಿದ್ದರು. ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು ಎಂದು ಹೇಳಿದ್ದಾರೆ.

Advertisement

Advertisement
Tags :
LatetsNewsNewsKannadaಅಕ್ರಮಅಂತ್ಯಸಂಸ್ಕಾರಮದ್ಯಮರಣೋತ್ತರ ಪರೀಕ್ಷೆಮೃತದೇಹ
Advertisement
Next Article