For the best experience, open
https://m.newskannada.com
on your mobile browser.
Advertisement

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ ತಿಳಿಸಿದೆ.
05:12 PM May 11, 2024 IST | Nisarga K
ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ   200ಕ್ಕೂ ಹೆಚ್ಚು ಜನ ಬಲಿ
ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ ತಿಳಿಸಿದೆ.

Advertisement

ಉತ್ತರ ಅಫಘಾನಿಸ್ತಾನ ಭಾಗದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ನದಿಗಳಲ್ಲೇ ಉಕ್ಕಿ ಹರಿಯುತ್ತಿದೆ. ಜನವಸತಿ ಪ್ರದೇಶಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.

ಅಲ್ಲದೇ ಪ್ರವಾಹದಿಂದಾಗಿ ಸುಮಾರು ನೂರಾರು ಜನರು ಗಾಯಗೊಂಡಿದ್ದಾರೆ. ಇನ್ನು ಹಲವರು ಪ್ರವಾಹದಲ್ಲಿ ಬಂದ ಮಣ್ಣಿನಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ರಾಷ್ಟ್ರೀಯ ಸೇವೆ ಮತ್ತು ಭದ್ರತಾ ಪಡೆಗಳು ಅವಶೇಷದಡಿ ಸಿಲುಕಿರುವ ಮೃತ ದೇಹಗಳನ್ನು ಹೊರ ತೆಗೆಯುವ ಕೆಲಸ ಮಾಡುತ್ತಿದ್ದಾರೆ.

Advertisement

Advertisement
Tags :
Advertisement