For the best experience, open
https://m.newskannada.com
on your mobile browser.
Advertisement

ಇನ್ನೂ 2 ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ

ಬಿರು ಬಿಸಿಲಿನಿಂದ ತತ್ತರಿಸಿ ಹೋಗಿದ್ದ ಕರ್ನಾಟಕದ ಜನತೆಗೆ ಮಳೆರಾಯ ತಂಪೆರೆಯುತ್ತಿದ್ದಾನೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ಮತ್ತು ಇಂದು ಭರ್ಜರಿ ಮಳೆಯಾಗಿದೆ.
09:05 PM Apr 12, 2024 IST | Ashitha S
ಇನ್ನೂ 2 ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ

ಬೆಂಗಳೂರು: ಬಿರು ಬಿಸಿಲಿನಿಂದ ತತ್ತರಿಸಿ ಹೋಗಿದ್ದ ಕರ್ನಾಟಕದ ಜನತೆಗೆ ಮಳೆರಾಯ ತಂಪೆರೆಯುತ್ತಿದ್ದಾನೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ಮತ್ತು ಇಂದು ಭರ್ಜರಿ ಮಳೆಯಾಗಿದೆ.

Advertisement

ಹೀಗಾಗಿ ನಾಡಿನ ಜನರು ಫುಲ್ ಖುಷಿ ಆಗಿದ್ದಾರೆ. ಹವಾಮಾನ ಇಲಾಖೆ ವರದಿ ಪ್ರಕಾರ ಮುಂದಿನ ಎರಡು ದಿನಗಳು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಏಪ್ರಿಲ್ 12 ರಿಂದ 14ರವರೆಗೆ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಯಾದಗಿರಿ, ಬೆಳಗಾವಿ, ಬೀದರ್, ವಿಜಯಪುರ, ರಾಯಚೂರು, ಕಲಬುರಗಿ, ಧಾರವಾಡ, ಗದಗ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು ಸೇರಿದಂತೆ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement

Advertisement
Tags :
Advertisement