ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ

ಸ್ಪೇನ್‌ನ ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ ಘಟನೆ ಶುಕ್ರವಾರ ರಾತ್ರಿ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
01:29 PM Mar 02, 2024 IST | Ashika S

ರಾಂಚಿ:  ಸ್ಪೇನ್‌ನ ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ ಘಟನೆ ಶುಕ್ರವಾರ ರಾತ್ರಿ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಪ್ರವಾಸಿ ದಂಪತಿ ತಾತ್ಕಾಲಿಕ ಟೆಂಟ್‌ನಲ್ಲಿ ರಾತ್ರಿ ಕಳೆಯುತ್ತಿದ್ದರು ಎಂದು ಪಿಟಿಐ ವರದಿ ಮಾಡಿದೆ. ಈ ದಂಪತಿ ಬಾಂಗ್ಲಾದೇಶದಿಂದ ದ್ವಿಚಕ್ರ ವಾಹನದಲ್ಲಿ ಆಗಮಿಸಿ ಬಿಹಾರ ಮೂಲಕ ನೇಪಾಳಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

ಏಳರಿಂದ ಎಂಟು ಸ್ಥಳೀಯ ಯುವಕರು ಅಪರಾಧದಲ್ಲಿ ಭಾಗಿಯಾಗಿದ್ದಾರೆ. ಅವರಲ್ಲಿ ಮೂವರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಸಂತ್ರಸ್ತೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೆಸರು ಹೇಳಲು ಬಯಸದ ಅಧಿಕಾರಿಯೊಬ್ಬರು ಹೇಳಿರುವುದಾಗಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದಿಲ್ಲ. ಆದರೆ ಕಾನೂನಿನ ಪ್ರಕಾರ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಬನ್ನಾ ಗುಪ್ತಾ ಹೇಳಿದ್ದಾರೆ.

Advertisement
Tags :
LatestNewsNewsKannadaಜಾರ್ಖಂಡ್ಪ್ರವಾಸಿಸಾಮೂಹಿಕ ಅತ್ಯಾಚಾರಸ್ಪೇನ್
Advertisement
Next Article