ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಾಲ್ವರು ಗಾಂಜಾ ಪೆಡ್ಲರ್‌ಗಳ ಬಂಧನ: 274 ಗ್ರಾಂ ಗಾಂಜಾ ಸಹಿತ ಲಕ್ಷಾಂತರ ಮೌಲ್ಯದ ಸೊತ್ತು ವಶ

ಮಣಿಪಾಲ ಪೆರಂಪಳ್ಳಿಯ ಶೀಂಬ್ರಾ ಬ್ರಿಡ್ಜ್‌ ಬಳಿ ಇಂದು ಮಧ್ಯಾಹ್ನ ಕಾರೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ ಮಣಿಪಾಲ ಪೊಲೀಸರು, 274 ಗ್ರಾಂ ತೂಕದ ಗಾಂಜಾ ಹಾಗೂ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
08:54 PM Nov 26, 2023 IST | Ashika S

ಉಡುಪಿ: ಮಣಿಪಾಲ ಪೆರಂಪಳ್ಳಿಯ ಶೀಂಬ್ರಾ ಬ್ರಿಡ್ಜ್‌ ಬಳಿ ಇಂದು ಮಧ್ಯಾಹ್ನ ಕಾರೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ ಮಣಿಪಾಲ ಪೊಲೀಸರು, 274 ಗ್ರಾಂ ತೂಕದ ಗಾಂಜಾ ಹಾಗೂ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Advertisement

ಬಂಧಿತ ಆರೋಪಿಗಳನ್ನು ಸಾಸ್ತಾನದ ಅಬ್ದುಲ್‌ ಲತೀಫ್‌ (32), ಕೋಟೇಶ್ವರದ ಮುಸ್ತಾಫ್‌ ಹಂಜಾ ( 35), ಸಾಸ್ತಾನದ ಮೊಹಮ್ಮದ್‌ ಅಶ್ಪಕ ( 21) ಹಾಗೂ ಉಪ್ಪೂರಿನ ಶಕಿಲೇಶ ( 25 ) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಶೀಂಬ್ರಾ ಬ್ರಿಡ್ಜ್‌ ಬಳಿ ಕಪ್ಪು ಬಣ್ಣದ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ 274 ಗ್ರಾಂ ತೂಕದ ಗಾಂಜಾ, 5 ಲಕ್ಷ ಮೌಲ್ಯದ ಕಾರು, 19130 ರೂ. ನಗದು, 20 ಸಾವಿರ ಮೌಲ್ಯದ 5 ಮೊಬೈಲ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Advertisement

ಮಣಿಪಾಲದಲ್ಲಿ ಮಾರಾಟ ಮಾಡಿ ಲಾಭ ಗಳಿಸುವ ಉದ್ದೇಶದಿಂದ ಗಾಂಜಾವನ್ನು ಶೇಖರಣೆ ಮಾಡಿಟ್ಟಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ನಾಲ್ಕು ಜನರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾದ ಕ್ರಮಾಂಕ 298/2023 ಕಲಂ: 8(c),20(b)(ii)(A) NDPS Act ರಂತೆ ಪ್ರಕರಣ ದಾಖಲಿಸಲಾಗಿದ್ದು, ಮಾದಕ ವಸ್ತುಗಳನ್ನು ಮಣಿಪಾಲದಲ್ಲಿ ಮಾರಾಟ ಮಾಡುವ ಜಾಲದ ಬಗ್ಗೆ ತನಿಖೆ ಮುಂದುವರಿಸಲಾಗಿದೆ.

ಮಣಿಪಾಲದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಕೇಂದ್ರವಾಗಿರಿಸಿಕೊಂಡು ಕಾರ್ಯ ನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದ್ದು, ಹಲವಾರು ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಿರುವುದು ಹಾಗೂ ಸೇವನೆ ಮಾಡಿರುವುದು ತಿಳಿದು ಬಂದಿದೆ. ಈ ನಿಟ್ಟಿನಲ್ಲೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisement
Tags :
LatetsNewsNewsKannadaಗಾಂಜಾಬ್ರಿಡ್ಜ್‌ಮಣಿಪಾಲವಸ್ತು
Advertisement
Next Article