For the best experience, open
https://m.newskannada.com
on your mobile browser.
Advertisement

ಸೌದಿ ಅರೇಬಿಯಾದಲ್ಲಿ ಭೀಕರ ಕಾರು ಅಪಘಾತ: ಹಳೆಯಂಗಡಿಯ ನಾಲ್ವರು ಮೃತ್ಯು

ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಂಗಳೂರು ಹೊರವಲಯದ ಹಳೆಯಂಗಡಿ ಮೂಲದ ದಂಪತಿ, 3 ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
04:50 PM Mar 21, 2024 IST | Ashika S
ಸೌದಿ ಅರೇಬಿಯಾದಲ್ಲಿ ಭೀಕರ ಕಾರು ಅಪಘಾತ  ಹಳೆಯಂಗಡಿಯ ನಾಲ್ವರು ಮೃತ್ಯು

ಮಂಗಳೂರು: ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಂಗಳೂರು ಹೊರವಲಯದ ಹಳೆಯಂಗಡಿ ಮೂಲದ ದಂಪತಿ, 3 ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

Advertisement

ಕತಾರ್‌ನಿಂದ ಸೌದಿ ಅರೇಬಿಯಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ಮಗುವಿನೊಂದಿಗೆ ದಂಪತಿ ತೆರಳುತ್ತಿದ್ದಾಗ ಗುರುವಾರ ಮುಂಜಾನೆ ಸುಮಾರು ನಾಲ್ಕು ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ದುರ್ಘಟನೆಯ ಮಹಿತಿ ಸಿಕ್ಕಿದ ಕೂಡಲೇ ಸ್ಥಳೀಯ ಅಧಿಕಾರಿಗಳು ಘಟನನಾ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಗಳನ್ನ ಕೈಗೊಂಡಿದ್ದಾರೆ.

ಅಫಘಾತ ತಾಯಿಫ್ ನಿಂದ ಸುಮಾರು 160 ಕಿಲೋ ಮೀಟರ್ ದೂರಲ್ಲಿ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement

ಹಳೆಯಂಗಡಿ ತೋಕೂರು ಸರಕಾರಿ ಶಾಲೆಯ ಪಕ್ಕದ ಕುಟುಂಬದ ಮೂಲ ಮನೆಯಲ್ಲಿ ಇದೀಗ ನೀರವ ಮೌನ ಆವರಿಸಿದೆ. ಅಪಘಾತಕ್ಕೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಆದ್ರೆ ಇತ್ತೀಚೆಗಿನ ವರ್ಷಗಳಲ್ಲಿ ಸೌದಿಯಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು ಈ ಬಗ್ಗೆ ಅಲ್ಲಿನ ರಸ್ತೆ ಸುರಕ್ಷಾ ಪ್ರಾಧಿಕಾರ ಕೂಡ ಕಳವಳ ವ್ಯಕ್ತಪಡಿಸಿದೆ.

Advertisement
Tags :
Advertisement