ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಫ್ರಾನ್ಸ್​ನಲ್ಲಿ ಓದ ಬಯಸುವ ಭಾರತೀಯ ವಿದ್ಯಾರ್ಥಿಗಳಿಗೆ ಮ್ಯಾಕ್ರನ್ ಉಡುಗೊರೆ

2030ರ ವೇಳೆಗೆ 30,000 ಭಾರತೀಯ ವಿದ್ಯಾರ್ಥಿಗಳನ್ನು ತನ್ನ ವಿಶ್ವವಿದ್ಯಾಲಯಗಳಿಗೆ ಸ್ವಾಗತಿಸುವ ಗುರಿಯನ್ನು ಫ್ರಾನ್ಸ್ ಹೊಂದಿದೆ ಎಂದು ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಇಂದು(ಜ.26) ಹೇಳಿದ್ದಾರೆ.
11:25 AM Jan 26, 2024 IST | Ashitha S

ದೆಹಲಿ: 2030ರ ವೇಳೆಗೆ 30,000 ಭಾರತೀಯ ವಿದ್ಯಾರ್ಥಿಗಳನ್ನು ತನ್ನ ವಿಶ್ವವಿದ್ಯಾಲಯಗಳಿಗೆ ಸ್ವಾಗತಿಸುವ ಗುರಿಯನ್ನು ಫ್ರಾನ್ಸ್ ಹೊಂದಿದೆ ಎಂದು ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಇಂದು(ಜ.26) ಹೇಳಿದ್ದಾರೆ.

Advertisement

ಫ್ರೆಂಚ್ ಮಾತನಾಡದ ವಿದ್ಯಾರ್ಥಿಗಳಿಗೆ ಅಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು ಅಂತಾರಾಷ್ಟ್ರೀಯ ತರಗತಿಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು. ಇದು ಉಭಯ ದೇಶಗಳ ನಡುವಿನ ಶೈಕ್ಷಣಿಕ ಸಂಬಂಧಗಳನ್ನು ಹೆಚ್ಚಿಸುವ ಪ್ರಮುಖ ಪ್ರಯತ್ನವಾಗಿದೆ.

ನಾವು ಫ್ರೆಂಚ್ ಕಲಿಯಲು ಹೊಸ ಕೇಂದ್ರಗಳೊಂದಿಗೆ ಅಲೈಯನ್ಸ್ ಫ್ರಾಂಚೈಸ್‌ಗಳ ನೆಟ್‌ವರ್ಕ್ ಅನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ನಾವು ಅಂತಾರಾಷ್ಟ್ರೀಯ ತರಗತಿಗಳನ್ನು ರಚಿಸುತ್ತಿದ್ದೇವೆ, ಇದು ಫ್ರೆಂಚ್ ಮಾತನಾಡದ ವಿದ್ಯಾರ್ಥಿಗಳಿಗೆ ನಮ್ಮ ವಿಶ್ವವಿದ್ಯಾಲಯಗಳಿಗೆ ಸೇರಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದ್ದಾರೆ.

Advertisement

ಭಾರತದಲ್ಲಿ ನಡೆದ 75ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮ್ಯಾಕ್ರನ್ ಈ ವಿಚಾರ ತಿಳಿಸಿದ್ದಾರೆ. ಈ ಯೋಜನೆಯು ಭಾರತದೊಂದಿಗೆ ಫ್ರಾನ್ಸ್‌ನ ಸಂಬಂಧವನ್ನು ಬಲಪಡಿಸುವ ಮಹತ್ವಾಕಾಂಕ್ಷೆಯ ಪ್ರಯತ್ನದ ಭಾಗವಾಗಿದೆ ಎಂದು ಹೇಳಿದರು.

Advertisement
Tags :
GOVERNMENTindiaLatestNewsNewsKannadaನವದೆಹಲಿಮ್ಯಾಕ್ರನ್
Advertisement
Next Article