ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಿಂದ ಉಚಿತ ವೈದ್ಯಕೀಯ ಶಿಬಿರ

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೆಯ ವರ್ಷಾಚರಣೆ ದಶಾಂಬಿಕೋತ್ಸವ ಪ್ರಯುಕ್ತ ಬಪ್ಪಳಿಗೆಯಲ್ಲಿನ ಮಾರಿಯಮ್ಮನ ದೇವಸ್ಥಾನದಲ್ಲಿ ಭಾನುವಾರ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಯಿತು.
03:36 PM Jan 10, 2024 IST | Gayathri SG

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೆಯ ವರ್ಷಾಚರಣೆ ದಶಾಂಬಿಕೋತ್ಸವ ಪ್ರಯುಕ್ತ ಬಪ್ಪಳಿಗೆಯಲ್ಲಿನ ಮಾರಿಯಮ್ಮನ ದೇವಸ್ಥಾನದಲ್ಲಿ ಭಾನುವಾರ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಯಿತು.

Advertisement

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಮಣ್ಯ ನಟ್ಟೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಮಾಜದ ಎಲ್ಲಾ ವರ್ಗದವರ ಆರೋಗ್ಯವೂ ಮುಖ್ಯ ಮತ್ತು ಉಚಿತ ವೈದ್ಯಕೀಯ ಶಿಬಿರದ ಉಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಹೇಳಿದರು.

ಮಕ್ಕಳ ತಜ್ಞ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಡಾ ಎಂ.ಎಸ್.ಶೆಣೈ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪುತ್ತೂರಿನ ತಾಲೂಕು ವೈದ್ಯಾಧಿಕಾರಿ ಡಾ.ದೀಪಕ್ ರೈ ಆರೋಗ್ಯ ತಪಾಸಣೆಯ ಅಗತ್ಯವನ್ನು ತಿಳಿಸಿದರು.

Advertisement

ಅಂಬಿಕಾ ಸಮೂಹ ಸಂಸ್ಥೆಯ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ದಶಾಂಬಿಕೋತ್ಸವ ಸಮಿತಿ ಅಧ್ಯಕ್ಷ, ಹಿರಿಯ ನ್ಯಾಯವಾದಿ ಮಹೇಶ್ ಕಜೆ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ, ನ್ಯಾಯವಾದಿ ಸೀಮಾ ನಾಗರಾಜ್, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಗೌರಿ ಕಾರ್ಯಕ್ರಮ ನಿರ್ವಹಿಸಿದರು. ಮೋಹನ್ ನೆಲ್ಲಿಗುಂಡಿ ಸಹಕರಿಸಿದರು.

Advertisement
Tags :
LatestNewsNewsKannadaಅಂಬಿಕಾ ವಿದ್ಯಾಲಯ
Advertisement
Next Article