ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂದು ʻಬಾಂಗ್ಲಾದೇಶʼದಲ್ಲಿ ಸಾರ್ವತ್ರಿಕ ಚುನಾವಣೆ: ʻಶೇಖ್ ಹಸೀನಾʼಗೆ ಗೆಲುವು ?

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಗೈರುಹಾಜರಿಯಿಂದಾಗಿ ಪ್ರಧಾನಿ ಶೇಖ್ ಹಸೀನಾ ಸತತ 4ನೇ ಬಾರಿಗೆ ಗೆಲ್ಲುವ ನಿರೀಕ್ಷೆಯಿದೆ ಎನ್ನಲಾಗಿದೆ. ಇನ್ನು ಬಾಂಗ್ಲಾದ ಪ್ರಮುಖ ವಿರೋಧ ಪಕ್ಷ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ-ಬಿಎನ್‌ಪಿ ಮಹತ್ವದ ಚುನಾವಣೆಯನ್ನು ಬಹಿಷ್ಕರಿಸಿವೆ. ಮತ್ತು 48 ಗಂಟೆಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಮನವಿ ಮಾಡಿದೆ.
12:35 PM Jan 07, 2024 IST | Ashitha S

ಢಾಕಾ: ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಗೈರುಹಾಜರಿಯಿಂದಾಗಿ ಪ್ರಧಾನಿ ಶೇಖ್ ಹಸೀನಾ ಸತತ 4ನೇ ಬಾರಿಗೆ ಗೆಲ್ಲುವ ನಿರೀಕ್ಷೆಯಿದೆ ಎನ್ನಲಾಗಿದೆ. ಇನ್ನು ಬಾಂಗ್ಲಾದ ಪ್ರಮುಖ ವಿರೋಧ ಪಕ್ಷ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ-ಬಿಎನ್‌ಪಿ ಮಹತ್ವದ ಚುನಾವಣೆಯನ್ನು ಬಹಿಷ್ಕರಿಸಿವೆ. ಮತ್ತು 48 ಗಂಟೆಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಮನವಿ ಮಾಡಿದೆ.

Advertisement

ಹೀಗಾಗಿ ಶೇಖ್ ಹಸೀನಾ ಅವರ ನೇತೃತ್ವದ ಅವಾಮಿ ಲೀಗ್ ಮೈತ್ರಿಕೂಟ ಯಾವುದೇ ವಿರೋಧ ಇಲ್ಲದೆ ಸುಲಭದ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ. ದೇಶಾದ್ಯಂತ 300 ಕ್ಷೇತ್ರಗಳಲ್ಲಿ ಮತದಾನಕ್ಕೆ ಬಹುತೇಕ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಭದ್ರತಾ ವ್ಯವಸ್ಥೆಯನ್ನೂ ಖಚಿತಪಡಿಸಿಕೊಂಡಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಚುನಾವಣಾ ಆಯೋಗದ ಪ್ರಕಾರ, 42,000 ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಭಾನುವಾರ(ಜ.07) ನಡೆಯಲಿರುವ ಮತದಾನದಲ್ಲಿ ಒಟ್ಟು 11.96 ಕೋಟಿ ನೋಂದಾಯಿತ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇನ್ನು ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಜ. 8ರ ನಾಳೆ ಬೆಳಗ್ಗೆ ಚುನಾವಣಾ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.

Advertisement

Advertisement
Tags :
indiaLatestNewsNewsKannadaನವದೆಹಲಿಶೇಖ್ ಹಸೀನಾಸಾರ್ವತ್ರಿಕ ಚುನಾವಣೆ
Advertisement
Next Article