ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜರ್ಮನಿ ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ

ಬರ್ಲಿನ್‌: ನಿನ್ನೆಯಷ್ಟೆ ಪಾಕಿಸ್ತಾನದ ವಾಯುನೆಲೆಗೆ ಉಗ್ರರು ದಾಳಿ ನಡೆಸಿದ್ದರು. ಈ ದಾಳಿ ವೇಳೆ 9ಕ್ಕೂ ಹೆಚ್ಚು ಉಗ್ರರನ್ನು ಸೇನೆ ಹೊಡೆದುರುಳಿಸಿತ್ತು. ಇದೀಗ ಉತ್ತರ ಜರ್ಮನಿಯ ನಗರವಾದ ಹ್ಯಾಂಬರ್ಗ್‌ನ ವಿಮಾನ ನಿಲ್ದಾಣದಲ್ಲಿ ಗುಂಡಿನ ಸದ್ದು ಕೇಳಿಬಂದಿದ್ದು, ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.
11:13 AM Nov 05, 2023 IST | Umesha HS

ಬರ್ಲಿನ್‌: ನಿನ್ನೆಯಷ್ಟೆ ಪಾಕಿಸ್ತಾನದ ವಾಯುನೆಲೆಗೆ ಉಗ್ರರು ದಾಳಿ ನಡೆಸಿದ್ದರು. ಈ ದಾಳಿ ವೇಳೆ 9ಕ್ಕೂ ಹೆಚ್ಚು ಉಗ್ರರನ್ನು ಸೇನೆ ಹೊಡೆದುರುಳಿಸಿತ್ತು. ಇದೀಗ ಉತ್ತರ ಜರ್ಮನಿಯ ನಗರವಾದ ಹ್ಯಾಂಬರ್ಗ್‌ನ ವಿಮಾನ ನಿಲ್ದಾಣದಲ್ಲಿ ಗುಂಡಿನ ಸದ್ದು ಕೇಳಿಬಂದಿದ್ದು, ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.

Advertisement

ವಿಮಾನ ನಿಲ್ದಾಣದಲ್ಲಿ ವಾಹನವೊಂದು ಭದ್ರತೆಯನ್ನು ಮೀರಿ ವಿಮಾನ ನಿಲ್ದಾಣದ ಆವರಣವನ್ನು ಪ್ರವೇಶಿಸಿ ಅವ್ಯವಸ್ಥೆ ಸೃಷ್ಟಿಸಿತು. ಈ ಸಂದರ್ಭದಲ್ಲಿ ವಾಹನದಲ್ಲಿದ್ದ ವ್ಯಕ್ತಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ದಾಳಿಯಿಂದಾಗಿ ಮುನ್ನೆಚ್ಚರಿಕೆಯಾಗಿ ಹ್ಯಾಂಬರ್ಗ್‌ನ ವಿಮಾನ ನಿಲ್ದಾಣವನ್ನು ಪ್ರಯಾಣಿಕರಿಗೆ ಮುಚ್ಚಲಾಗಿದೆ ಮತ್ತು ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಾಹಿತಿ ಪ್ರಕಾರ, ಆಯುಧ ಹಿಡಿದ ವ್ಯಕ್ತಿಯೊಬ್ಬ ಭದ್ರತಾ ಗೇಟ್ ಮುರಿದು ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ್ದ, ಈ ಗುಂಡಿನ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ.ವಿಮಾನ ನಿಲ್ದಾಣದಲ್ಲಿ ಎಲ್ಲರೂ ಸುರಕ್ಷಿತವಾಗಿದ್ದಾರೆ.
ಪೊಲೀಸರ ಪ್ರಕಾರ, ಕಾರಿನಲ್ಲಿದ್ದ ವ್ಯಕ್ತಿ ಟರ್ಮಿನಲ್ 1 ತಲುಪಿದ್ದರು. ಗಾಳಿಯಲ್ಲಿ ಗುಂಡು ಹಾರಿಸುವುದರ ಜೊತೆಗೆ, ಆ ವ್ಯಕ್ತಿ ತನ್ನ ಕಾರಿನಿಂದ ಎರಡು ಬೆಂಕಿಯ ಬಾಟಲಿಗಳನ್ನು ಎಸೆದಿದ್ದಾನೆ. ಆದರೆ, ಈ ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ.

Advertisement

Advertisement
Tags :
attackGERMANY. AIRPORTterrorಉಗ್ರರುಕಾರುಜರ್ಮನಿದಾಳಿಪ್ರಯಾಣಿಕವಿಮಾನ ನಿಲ್ದಾಣಸೇನೆ
Advertisement
Next Article