For the best experience, open
https://m.newskannada.com
on your mobile browser.
Advertisement

ದುಬೈಯ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲದ ಯುವತಿ ದಾರುಣ ಅಂತ್ಯ !

ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲ ಮೂಲದ ಯುವತಿ ದಾರುಣ ಅಂತ್ಯ ಕಂಡಿದ್ದಾಳೆ. ಕೋಟೆಕಾರ್ ಕೆಂಪುಮಣ್ಣು ವಿದಿಶಾ (28) ಮೃತಪಟ್ಟ ಯುವತಿಯಾಗಿದ್ದಾಳೆ.
04:11 PM Feb 23, 2024 IST | Ashitha S
ದುಬೈಯ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲದ ಯುವತಿ ದಾರುಣ ಅಂತ್ಯ

ಮಂಗಳೂರು :  ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲ ಮೂಲದ ಯುವತಿ ದಾರುಣ ಅಂತ್ಯ ಕಂಡಿದ್ದಾಳೆ. ಕೋಟೆಕಾರ್ ಕೆಂಪುಮಣ್ಣು ವಿದಿಶಾ (28) ಮೃತಪಟ್ಟ ಯುವತಿಯಾಗಿದ್ದಾಳೆ.

Advertisement

ಮಂಗಳೂರು ತಾಲೂಕು ಪಂ. ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.

2019ರಲ್ಲಿ ದುಬೈಗೆ ತೆರಳಿ ಎಕ್ಸ್‌ಕ್ಯೂಜೆಟ್‍ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯನಿರ್ವಹಿಸಿದ್ದರು. ಪ್ರತೀ ದಿನ ಕಂಪೆನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಫೆ. 22ರ ಗುರುವಾರ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ.

Advertisement

ಅಪಘಾತದ ಪರಿಣಾಮ ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದೆಸೆಯಲ್ಲೇ ರೋಟರ್ ಆ್ಯಕ್ಟ್ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು. ದುಬೈಯಲ್ಲಿ ವಾಹನ ಚಾಲನಾ ಲೈಸೆನ್ಸ್ ಪಡೆದ ಬಳಿಕ ಕಳೆದ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದ ವಿದಿಶಾ ತಂದೆ, ತಾಯಿಯನ್ನು ದುಬೈಗೆ ಕರೆಸಿ ಕಾರಿನಲ್ಲಿ ಸುತ್ತಾಡಿಸಿದ್ದರು. ತಂದೆ-ತಾಯಿ ಮಗಳ ಮದುವೆಯ ಸಿದ್ಧತೆ ನಡೆಸುತ್ತಿರುವಾಗಲೇ ಈ ದುರಂತ ನಡೆದಿದೆ.

Advertisement
Tags :
Advertisement