ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೇಸಿಗೆಯಲ್ಲಿ ದೇಹದ ಸ್ವಚ್ಛತೆಗೆ ಆದ್ಯತೆ ನೀಡಿ

ಬೇಸಿಗೆಯಲ್ಲಿ ಮೂಗು, ಕಿವಿ, ಬಾಯಿ, ಚರ್ಮಗಳಿಗೆ ಸಂಬಂಧಿಸಿದಂತೆ ಕಾಯಿಲೆಗಳಿದ್ದರೆ ವೈದ್ಯರಿಗೆ ತೋರಿಸಿ ಅವರ ಸಲಹೆಗಳನ್ನು ಅನುಸರಿಸುವುದು ಬಹುಮುಖ್ಯವಾಗಿದೆ. ವೈಯಕ್ತಿಕ ಸ್ವಚ್ಚತೆಗೆ ಹೆಚ್ಚು ಗಮನ  ನೀಡಿ ಕಂಕುಳಲ್ಲಿ ಬೆಳೆಯುವ ಅನಗತ್ಯ ಕೂದಲುಗಳನ್ನು ತೆಗೆದು ಸ್ವಚ್ಛಗೊಳಿಸುವ ಮೂಲಕ ದುರ್ವಾಸನೆಗೆ ಇತಿಶ್ರೀ ಹಾಡಬೇಕು.
10:23 AM Apr 11, 2024 IST | Ashika S

ಬೇಸಿಗೆಯಲ್ಲಿ ಮೂಗು, ಕಿವಿ, ಬಾಯಿ, ಚರ್ಮಗಳಿಗೆ ಸಂಬಂಧಿಸಿದಂತೆ ಕಾಯಿಲೆಗಳಿದ್ದರೆ ವೈದ್ಯರಿಗೆ ತೋರಿಸಿ ಅವರ ಸಲಹೆಗಳನ್ನು ಅನುಸರಿಸುವುದು ಬಹುಮುಖ್ಯವಾಗಿದೆ. ವೈಯಕ್ತಿಕ ಸ್ವಚ್ಚತೆಗೆ ಹೆಚ್ಚು ಗಮನ  ನೀಡಿ ಕಂಕುಳಲ್ಲಿ ಬೆಳೆಯುವ ಅನಗತ್ಯ ಕೂದಲುಗಳನ್ನು ತೆಗೆದು ಸ್ವಚ್ಛಗೊಳಿಸುವ ಮೂಲಕ ದುರ್ವಾಸನೆಗೆ ಇತಿಶ್ರೀ ಹಾಡಬೇಕು.

Advertisement

ಪ್ರತಿದಿನ ಕನಿಷ್ಟ ಎರಡು ಲೀಟರ್‌ನಷ್ಟು ನೀರನ್ನು  ಕುಡಿಯಬೇಕು. ತಲೆ ಕೂದಲು ಕೂಡ ವಾಸನೆ ಬೀರುತ್ತದೆ. ಆದ್ದರಿಂದ ಯುವಕರಾದರೆ ಚಿಕ್ಕದಾಗಿ ಕ್ಷೌರ ಮಾಡಿ ತಲೆಯಲ್ಲಿನ ಹೊಟ್ಟನ್ನು ನಿಯಂತ್ರಿಸಲು ಮುಂದಾಗಬೇಕು. ಸ್ನಾನ ಮಾಡುವಾಗ ಕಂಕುಳು, ಕಿವಿ, ಸೇರಿದಂತೆ ಇನ್ನಿತರ ಭಾಗಗಳನ್ನು ಚೆನ್ನಾಗಿ ಸೋಪು ಬಳಸಿ ತೊಳೆಯಬೇಕು. ವ್ಯಾಯಾಮ, ಮುಂಜಾನೆ  ವಾಕಿಂಗ್ ಮಾಡುವ ಅಭ್ಯಾಸ ರೂಢಿಸಿಕೊಳ್ಳಬೇಕು.

ಬಿಗಿಯಾದ ಉಡುಪುಗಳನ್ನು ಧರಿಸದೆ, ಶರೀರಕ್ಕೆ ಗಾಳಿಯಾಡುವ ಹಾಗೂ ಹತ್ತಿಬಟ್ಟೆಗೆ ಆದ್ಯತೆ ನೀಡಬೇಕು. ಬೇರೆಯವರು ಬಳಸಿದ ಟವಲ್ ಬಳಸದೆ ಒಗೆದು ಒಣಗಿಸಿ ಬಳಸಬೇಕು. ಬೇರೆಯವರಿಗೆ ಅಸಹ್ಯ ಎನಿಸದ ಉತ್ತಮ ಸುವಾಸನೆ ಬೀರುವ  ಸುಗಂಧ ದ್ರವ್ಯಗಳನ್ನು ಲೇಪಿಸಿಕೊಳ್ಳಬೇಕು. ಅವು ಶರೀರಕ್ಕೆ ಒಗ್ಗುವಂತಿದ್ದರೆ ಮಾತ್ರ ಬಳಸಬೇಕು. ವೈದ್ಯರ ಸಲಹೆಯೂ ಅಗತ್ಯವಾಗಿರುತ್ತದೆ.

Advertisement

ಪ್ರತಿ ದಿನ ಉದ್ಯೋಗದ ನಿಮಿತ್ತ ವಿವಿಧ ಕಚೇರಿಗೆ ಹೋಗುವ ಮಹಿಳಾ ಉದ್ಯೋಗಿಗಳು ಕೆಲಸದ ಜತೆಗೆ ತಮ್ಮ  ಸೌಂದರ್ಯವನ್ನೂ ಕಾಪಾಡಿಕೊಳ್ಳುವುದು ಅನಿವಾರ್ಯ. ಉರಿ ಬಿಸಿಲಿಗೆ ತಮ್ಮ ಮುಖ ಕಾಂತಿಹೀನವಾಗಿ ಬಿಡುತ್ತದೆ. ಆಗಾಗ್ಗೆ ಬ್ಯೂಟಿಪಾರ್ಲರ್‌ಗಳಿಗೆ ಹೋಗುವಂತೆಯೂ ಇಲ್ಲ. ಹೀಗಾಗಿ ಬಿಸಿಲಿನ ಬೇಗೆಯಿಂದ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ತುಳಸಿ, ಬೇವಿನ ಫೇಸ್ ಪ್ಯಾಕ್ ಬಳಸುವುದು ಸೂಕ್ತ.

ತಣ್ಣೀರಿನಿಂದ ರೋಸ್ ವಾಟರ್‌ನಿಂದ ಮುಖ ತೊಳೆದುಕೊಂಡರೆ ಚರ್ಮದ ಕಾಂತಿ ಹೊಳೆಯುತ್ತಿರುತ್ತದೆ. ಇದು ಕೇವಲ  ಚರ್ಮಕ್ಕೆ ಕಾಂತಿ ನೀಡುವುದಲ್ಲದೇ, ಮುಖದಲ್ಲಿ ರಕ್ತ ಸಂಚಾರಕ್ಕೂ ಸಹಾಯ ಮಾಡಲಿದೆ. ದಿನವಿಡೀ ತಮ್ಮ ತ್ವಚೆಯನ್ನು ಕಾಪಾಡಿಕೊಳ್ಳಲು ತಮ್ಮ ಹ್ಯಾಂಡ್ ಬ್ಯಾಗ್‌ಗಳಲ್ಲಿ ಕೆಲ ಸೌಂದರ್ಯ ವರ್ದಕಗಳನ್ನು ಇಟ್ಟುಕೊಳ್ಳುವುದು ಸೂಕ್ತ. ತಮಗೆ ಸೂಕ್ತವಾದ ಪೌಡರ್‌ನ್ನು ಆಗಾಗ್ಗೆ ಹಚ್ಚುತ್ತಿರಬೇಕು.

ಬಿಸಿಲಿನ ತಾಪಕ್ಕೆ ಸುಸ್ತು, ನೀರಡಿಕೆ, ತಲೆಸುತ್ತು ಮೊದಲಾದವುಗಳು ಬಾಧಿಸುವುದು ಸಾಮಾನ್ಯವಾಗಿದ್ದು, ತಲೆನೋವು  ಕಾಡುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಬಿಸಿಲಿನಿಂದಾಗುವ ಕೆಲವು ತೊಂದರೆಗಳನ್ನು ತಪ್ಪಿಸುವ ಸಲುವಾಗಿ ತೆಳು ಬಣ್ಣದ ಸಡಿಲವಾದ ಹತ್ತಿಯ ಬಟ್ಟೆ ಧರಿಸಬೇಕು. ಕೈಗೆಟಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಬೇಕು. ಆಗಾಗ್ಗೆ ಧಾರಾಳವಾಗಿ ಉಪ್ಪು, ಸಕ್ಕರೆ ಮಿಶ್ರಿತ ನೀರು, ಹಣ್ಣಿನ ರಸ ಪಾನಕ ಸೇವಿಸಬೇಕು. ಕಾಫಿ ಟೀ ಸೇವನೆ ಕಡಿಮೆ ಮಾಡಬೇಕು. ಕಾರ್ಬೋನೇಟೆಡ್ ಪಾನೀಯಗಳನ್ನು ತ್ಯಜಿಸಬೇಕು. ನೀರು, ಮಜ್ಜಿಗೆ, ಎಳನೀರು ಕುಡಿಯಬೇಕು.

ಹೀಗೆ ಒಂದಷ್ಟು ಕ್ರಮಗಳನ್ನು ನಾವು ಅನುಸರಿಸುವುದರಿಂದ ಬೇಸಿಗೆಯಲ್ಲಿ ಕಾಡಬಹುದಾದ ತೊಂದರೆಯಿಂದ  ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಮೊದಲಿಗೆ ನಮ್ಮ ಬಗ್ಗೆ ನಾವು ಗಮನಹರಿಸಿ ಆರೋಗ್ಯದತ್ತ ನಿಗಾವಹಿಸುವುದು ಒಳ್ಳೆಯದು.

Advertisement
Tags :
LatetsNewsNewsKarnataka
Advertisement
Next Article