ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತಕ್ಷಣ ಬರ ನಿರ್ವಹಣೆಗೆ ಹೋಗಿ: ಉಸ್ತುವಾರಿ ಸಚಿವರಿಗೆ ಸಿಎಂ ಖಡಕ್‌ ಸೂಚನೆ

ರಾಜ್ಯದಲ್ಲಿ ಮಳೆಕೊರತೆ ಕಾರಣ, ಬರಗಾಲದ ಭೀಕರತೆ ಕಾಡುತ್ತಿದೆ. ಕುಡಿಯುವ ನೀರು, ವಿದ್ಯುತ್‌ ಸೇರಿದಂತೆ ಮೂಲಭೂತ ಸೌಲಭ್ಯಗಳು ಇಲ್ಲದೆ ರೈತರು ಸೇರಿದಂತೆ ಪ್ರತಿಯೊಬ್ಬರೂ ಕಂಗೆಡುವಂತಾಗಿದೆ. ನವೆಂಬರ್‌ನಲ್ಲಿಯೇ ನದಿ ತೊರೆಗಳು ಬತ್ತಿ ಹೋಗಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಗತಿಯೇನು ಎಂದು ಜನರು ಆಡಿಕೊಳ್ಳುವಂತಾಗಿದೆ.
02:10 PM Nov 04, 2023 IST | Ashika S

ಬೆಂಗಳೂರು: ರಾಜ್ಯದಲ್ಲಿ ಮಳೆಕೊರತೆ ಕಾರಣ, ಬರಗಾಲದ ಭೀಕರತೆ ಕಾಡುತ್ತಿದೆ. ಕುಡಿಯುವ ನೀರು, ವಿದ್ಯುತ್‌ ಸೇರಿದಂತೆ ಮೂಲಭೂತ ಸೌಲಭ್ಯಗಳು ಇಲ್ಲದೆ ರೈತರು ಸೇರಿದಂತೆ ಪ್ರತಿಯೊಬ್ಬರೂ ಕಂಗೆಡುವಂತಾಗಿದೆ. ನವೆಂಬರ್‌ನಲ್ಲಿಯೇ ನದಿ ತೊರೆಗಳು ಬತ್ತಿ ಹೋಗಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಗತಿಯೇನು ಎಂದು ಜನರು ಆಡಿಕೊಳ್ಳುವಂತಾಗಿದೆ.

Advertisement

ಹೀಗಾಗಿ ಸರ್ಕಾರ ರಾಜ್ಯದ 216 ತಾಲೂಕುಗಳನ್ನು ಈಗಾಗಲೇ ಬರಪೀಡಿತವೆಂದು ಘೋಷಣೆ ಮಾಡಿದೆ. ಶಾಸಕರು ಹಾಗೂ ಸಚಿವರು ತಮ್ಮ ಸಂಬಂಧಪಟ್ಟ ಜಿಲ್ಲೆಗಳಿಗೆ ತೆರಳಿ ಬರ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರುಗಳು ಮುಂದಿನ ಎರಡು ವಾರಗಳಲ್ಲಿ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲೂಕುಗಳಿಗೆ ಭೇಟಿ ನೀಡಿ, ಕುಡಿಯುವ ನೀರು, ಮೇವು, ಉದ್ಯೋಗ, ಬೆಳೆಹಾನಿ, ಮುಂತಾದವುಗಳ ಸ್ಥಿತಿಗತಿಗಳ ಕುರಿತು ಪರಿಶೀಲಿಸಿ, ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ಮಾಹಿತಿ ಸಂಗ್ರಹಿಸುವುದು ಹಾಗೂ ಸ್ಥಳೀಯ ಶಾಸಕರೊಂದಿಗೆ ಗೋಶಾಲೆ, ಮೇವು ಬ್ಯಾಂಕ್, ಕುಡಿಯುವ ನೀರು, ಉದ್ಯೋಗ ಸೃಷ್ಟಿ ಮುಂತಾದ ಪರಿಹಾರ ಕ್ರಮಗಳ ಬಗ್ಗೆ ಸಮಾಲೋಚಿಸಿ, ಅಗತ್ಯವಿರುವ ಕಡೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Advertisement

Advertisement
Tags :
LatetsNewsNewsKannadaಬರಗಾಲಬೇಸಿಗೆಭೀಕರತೆಮಳೆಕೊರತೆಮೂಲಭೂತ ಸೌಲಭ್ಯಸಿಎಂ
Advertisement
Next Article