ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆ: ಚಿನ್ನ ಗ್ರಾಂಗೆ 20 ರೂ ಇಳಿಕೆ

ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿಯುತ್ತಿದೆ. ಚಿನ್ನದ ಬೆಲೆ ಗ್ರಾಂಗೆ 20 ರೂ ಇಳಿದರೆ, ಬೆಳ್ಳಿ ಬೆಲೆ ಗ್ರಾಮ್​ಗೆ 20 ಪೈಸೆಯಷ್ಟು ಕಡಿಮೆ ಆಗಿದೆ.
07:26 AM Dec 12, 2023 IST | Ashika S

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿಯುತ್ತಿದೆ. ಚಿನ್ನದ ಬೆಲೆ ಗ್ರಾಂಗೆ 20 ರೂ ಇಳಿದರೆ, ಬೆಳ್ಳಿ ಬೆಲೆ ಗ್ರಾಮ್​ಗೆ 20 ಪೈಸೆಯಷ್ಟು ಕಡಿಮೆ ಆಗಿದೆ.

Advertisement

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,950 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,130 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,580 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,950 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,380 ರುಪಾಯಿಯಲ್ಲಿ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ): ಬೆಂಗಳೂರು: 56,950 ರೂ, ಚೆನ್ನೈ: 57,500 ರೂ, ಮುಂಬೈ: 56,950 ರೂ, ದೆಹಲಿ: 57,050 ರೂ, ಕೋಲ್ಕತಾ: 56,950 ರೂ, ಕೇರಳ: 56,950 ರೂ, ಅಹ್ಮದಾಬಾದ್: 57,000 ರೂ, ಜೈಪುರ್: 57,100 ರೂ, ಲಕ್ನೋ: 57,100 ರೂ, ಭುವನೇಶ್ವರ್: 56,950 ರೂ ಆಗಿದೆ.

Advertisement

ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

Advertisement
Tags :
LatetsNewsNewsKannadaಇಳಿಕೆಚಿನ್ನಬೆಲೆಬೆಳ್ಳಿ
Advertisement
Next Article