ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಪ್ರಾಪ್ತ ಬಾಲಕನಿಂದ 12.46 ಲಕ್ಷ ಮೌಲ್ಯದ ಚಿನ್ನದ ಬಿಸ್ಕೆಟ್ ವಶ

ತಾನು ಕೆಲಸ ಮಾಡುತ್ತಿದ್ದ ವ್ಯಕ್ತಿಯ ಬಳಿಯಿಂದ 12.46 ಲಕ್ಷ ರೂಪಾಯಿ ಮೌಲ್ಯದ ಎರಡು ಚಿನ್ನದ ಬಿಸ್ಕತ್‌ಗಳನ್ನು ಕದ್ದೊಯ್ದ ಅಪ್ರಾಪ್ತ ಬಾಲಕನನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ಬಂಧಿಸಿದೆ.
05:32 PM Jan 27, 2024 IST | Ashika S

ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದ ವ್ಯಕ್ತಿಯ ಬಳಿಯಿಂದ 12.46 ಲಕ್ಷ ರೂಪಾಯಿ ಮೌಲ್ಯದ ಎರಡು ಚಿನ್ನದ  ಬಿಸ್ಕೆಟ್ ಗಳನ್ನು ಕದ್ದೊಯ್ದ ಅಪ್ರಾಪ್ತ ಬಾಲಕನನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ಬಂಧಿಸಿದೆ.

Advertisement

ಬಾಲಕ ರಾಜಸ್ಥಾನ ಮೂಲದವನಾಗಿದ್ದು, ಜನವರಿ 25 ರಂದು ಇಂಡಿಗೋ ಫ್ಲೈಟ್ (6E 586) ಮೂಲಕ ಅಹಮದಾಬಾದ್‌ಗೆ ತೆರಳಲು ಪ್ಲಾನ್ ಮಾಡಿದ್ದನು. ಮುಂಜಾನೆ 1.15 ರ ಸುಮಾರಿಗೆ ಭದ್ರತಾ ತಪಾಸಣೆಯ ಸಮಯದಲ್ಲಿ, ಡೋರ್ ಫ್ರೇಮ್ ಮೆಟಲ್ ಡಿಟೆಕ್ಟರ್ ಅಲಾರಾಂ ಹೊಡೆದಿದೆ.

ಚಿನ್ನದ ಬಿಸ್ಕೆಟ್ ಜೊತೆ ಗುರುವಾರ ಬೆಂಗಳೂರು ಬಿಟ್ಟು ಹೊರಡಲು ಪ್ಲಾನ್ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಾಲಕ ತನ್ನ ಪಾದರಕ್ಷೆಯಲ್ಲಿ ಬಿಸ್ಕೆಟ್‌ಗಳನ್ನು ಬಚ್ಚಿಟ್ಟಿದ್ದ.

Advertisement

ಸಿಐಎಸ್‌ಎಫ್ ಸಬ್ ಇನ್ಸ್‌ಪೆಕ್ಟರ್ ದೀಪಕ್ ತನ್ವರ್ ನೀಡಿದ ದೂರಿನ ಮೇರೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕನನ್ನು ವೀಕ್ಷಣಾಲಯಕ್ಕೆ ಕಳುಹಿಸಲಾಗಿದೆ.

Advertisement
Tags :
LatetsNewsNewsKannadaಅಪ್ರಾಪ್ತ ಬಾಲಕಕೆಲಸಚಿನ್ನಬಿಸ್ಕತ್‌ವಿಮಾನ ನಿಲ್ದಾಣ
Advertisement
Next Article