ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದೇಶದಲ್ಲಿ ಚಿನ್ನದ ಬೆಲೆ ಇಂದು ಯಥಾಸ್ಥಿತಿ: ಬೆಳ್ಳಿ ತುಸು ಇಳಿಕೆ

ದೇಶದಲ್ಲಿ ಚಿನ್ನದ ಬೆಲೆ ಇಂದು ಯಥಾಸ್ಥಿತಿಯಲ್ಲಿದ್ದು, ಬೆಳ್ಳಿ ಬೆಲೆಯಲ್ಲಿ ತುಸು ಇಳಿಕೆ ಆಗಿದೆ. ಚೆನ್ನೈನಲ್ಲಿ ಚಿನ್ನದ ಬೆಲೆ ತುಸು ಇಳಿಕೆ ಆಗಿದೆ. ವಿದೇಶದ ಕೆಲವೆಡೆ ಏರಿಳಿತಗಳಾಗಿವೆ. ಬೆಳ್ಳಿ ಬೆಲೆ ಭಾರತದಲ್ಲಿ ಬಹುತೇಕ ಕಡೆ ಸ್ವಲ್ಪಮಟ್ಟಿಗೆ ಕಡಿಮೆ ಆಗಿದೆ.
07:34 AM Dec 20, 2023 IST | Ashika S

ಬೆಂಗಳೂರು: ದೇಶದಲ್ಲಿ ಚಿನ್ನದ ಬೆಲೆ ಇಂದು ಯಥಾಸ್ಥಿತಿಯಲ್ಲಿದ್ದು, ಬೆಳ್ಳಿ ಬೆಲೆಯಲ್ಲಿ ತುಸು ಇಳಿಕೆ ಆಗಿದೆ. ಚೆನ್ನೈನಲ್ಲಿ ಚಿನ್ನದ ಬೆಲೆ ತುಸು ಇಳಿಕೆ ಆಗಿದೆ. ಬೆಳ್ಳಿ ಬೆಲೆ ಭಾರತದಲ್ಲಿ ಬಹುತೇಕ ಕಡೆ ಸ್ವಲ್ಪಮಟ್ಟಿಗೆ ಕಡಿಮೆ ಆಗಿದೆ.

Advertisement

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,400 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,620 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,750 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,400 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರೂಪಾಯಿಯಲ್ಲಿ ಇದೆ.

Advertisement

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ): ಬೆಂಗಳೂರು: 7,550 ರೂ, ಚೆನ್ನೈ: 7,950 ರೂ, ಮುಂಬೈ: 7,750 ರೂ, ದೆಹಲಿ: 7,750 ರೂ, ಕೋಲ್ಕತಾ: 7,750 ರೂ, ಕೇರಳ: 7,950 ರೂ, ಅಹ್ಮದಾಬಾದ್: 7,750 ರೂ, ಜೈಪುರ್: 7,750 ರೂ, ಲಕ್ನೋ: 7,750 ರೂ, ಭುವನೇಶ್ವರ್: 7,950 ರೂ ಆಗಿದೆ.

ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

Advertisement
Tags :
LatetsNewsNewsKannadaಇಳಿಕೆಚಿನ್ನಬೆಲೆಬೆಳ್ಳಿ
Advertisement
Next Article