ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಗುಡ್‌ ನ್ಯೂಸ್‌: ಮಂಗಳೂರು -ಮಡಗಾಂ ವಂದೇ ಭಾರತ್‌ ಓಡಾಟಕ್ಕೆ ಸರ್ವಸನ್ನದ್ಧ

ಮಂಗಳೂರು: ಮಂಗಳೂರು -ಮಡಗಾಂ ವಂದೇ ಭಾರತ್‌ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ರೈಲು ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ. ಅದೇ ರೀತಿ ಬೆಂಗಳೂರು ಮಂಗಳೂರು ವಂದೇ ಭಾರತ್‌ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿಯೇ ಆ ಬೇಡಿಕೆಯೂ ಈಡೇರಲಿದೆ. ಜಿಲ್ಲೆಯ ನಾಗರಿಕರ ಬೇಡಿಕೆ ಈಡೇರಿಸಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸುವುದಾಗಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕಟೀಲ್‌ ತಿಳಿಸಿದ್ದಾರೆ.
10:00 PM Nov 07, 2023 IST | Umesha HS

ಮಂಗಳೂರು: ಮಂಗಳೂರು -ಮಡಗಾಂ ವಂದೇ ಭಾರತ್‌ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ರೈಲು ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ. ಅದೇ ರೀತಿ ಬೆಂಗಳೂರು ಮಂಗಳೂರು ವಂದೇ ಭಾರತ್‌ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿಯೇ ಆ ಬೇಡಿಕೆಯೂ ಈಡೇರಲಿದೆ. ಜಿಲ್ಲೆಯ ನಾಗರಿಕರ ಬೇಡಿಕೆ ಈಡೇರಿಸಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸುವುದಾಗಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕಟೀಲ್‌ ತಿಳಿಸಿದ್ದಾರೆ.

Advertisement

ದೇಶದಲ್ಲಿ ವಂದೇ ಭಾರತ್ ರೈಲು ಕ್ರಾಂತಿಯನ್ನೇ ಮಾಡುತ್ತಿದೆ. ಕೊಂಚ ದುಬಾರಿಯಾದರೂ ಈ ಸೆಮಿ ಹೈಸ್ಪೀಡ್ ರೈಲು ಎಕ್ಸ್‌ಪ್ರೆಸ್ ಅನ್ನು ಪ್ರಯಾಣಿಕರು ತುಂಬಾ ಇಷ್ಟಪಡುತ್ತಿದ್ದಾರೆ. ಈಗಾಗಲೇ ದೇಶಾದ್ಯಂತ ವಂದೇ ಭಾರತ್ ರೈಲುಗಳು ಸಂಚಾರ ನಡೆಸುತ್ತಿವೆ. ಎಲ್ಲಾ ರಾಜ್ಯಗಳಿಂದಲೂ ಈ ರೈಲಿಗೆ ಬೇಡಿಕೆ ಬರುತ್ತಿದೆ. ಈ ಕಾರಣಕ್ಕಾಗಿಯೇ ರೈಲ್ವೆ ಸಚಿವಾಲಯವು ಈ ರೈಲುಗಳ ಸಂಖ್ಯೆಯನ್ನು ನಿರಂತರವಾಗಿ ಹೆಚ್ಚಿಸುತ್ತಿದೆ. ಅದೇ ರೀತಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮಂಗಳೂರು -ಮಡಗಾಂ ನಡುವೆ ರೈಲು ಸಂಪರ್ಕ ಒದಗಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.

Advertisement
Advertisement
Tags :
mangaloreರೈಲು
Advertisement
Next Article