For the best experience, open
https://m.newskannada.com
on your mobile browser.
Advertisement

ಆರ್‌ ಸಿ ಬಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್

ವಿರಾಟ್ ಕೊಹ್ಲಿ ಭಾನುವಾರ ಭಾರತಕ್ಕೆ ಮರಳಿದ್ದಾರೆ. ಅಲ್ಲದೆ ಶೀಘ್ರದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪೂರ್ವಸಿದ್ಧತಾ ಶಿಬಿರಕ್ಕೆ ಸೇರಿಕೊಳ್ಳಲಿದ್ದಾರೆ.
06:08 PM Mar 17, 2024 IST | Ashika S
ಆರ್‌ ಸಿ ಬಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್

ಬೆಂಗಳೂರು: ವಿರಾಟ್ ಕೊಹ್ಲಿ ಭಾನುವಾರ ಭಾರತಕ್ಕೆ ಮರಳಿದ್ದಾರೆ. ಅಲ್ಲದೆ ಶೀಘ್ರದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪೂರ್ವಸಿದ್ಧತಾ ಶಿಬಿರಕ್ಕೆ ಸೇರಿಕೊಳ್ಳಲಿದ್ದಾರೆ.

Advertisement

ಈ ಸಂಬಂಧ ಇಂಡಿಯನ್ ಪ್ರೀಮಿಯರ್ ಲೀಗ್‌ನ ಅಧಿಕೃತ ಪ್ರಸಾರಕರಾದ ಸ್ಟಾರ್ ಸ್ಪೋರ್ಟ್ಸ್ ವಿಡಿಯೊ ಹಂಚಿಕೊಂಡಿದೆ.

ವೈಯಕ್ತಿಕ ಕಾರಣದಿಂದಾಗಿ ಕಳೆದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದರು. ವಿರಾಟ್ ಅನುಪಸ್ಥಿತಿಯಲ್ಲೂ ತವರಿನಲ್ಲಿ ನಡೆದ ಸರಣಿಯಲ್ಲಿ ಟೀಮ್ ಇಂಡಿಯಾ 4-1ರ ಅಂತರದ ಭರ್ಜರಿ ಗೆಲುವು ದಾಖಲಿಸಿತ್ತು.ಈ ನಡುವೆ ಎರಡನೇ ಮಗುವಿನ ಆಗಮನದ ಖುಷಿಯ ವಿಚಾರವನ್ನು ವಿರಾಟ್ ಕೊಹ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು.

Advertisement

ಕೊಹ್ಲಿ ಈಗ ಆರ್‌ಸಿಬಿ ಪರ ಐಪಿಎಲ್‌ನಲ್ಲಿ ಆಡುವುದಕ್ಕಾಗಿ ಆಗಮಿಸಿದ್ದಾರೆ. ಮುಂಬರುವ ಟ್ವೆಂಟಿ-20 ವಿಶ್ವಕಪ್‌ಗೂ ಮುನ್ನ ಉತ್ತಮ ಲಯ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

Advertisement
Tags :
Advertisement