For the best experience, open
https://m.newskannada.com
on your mobile browser.
Advertisement

ರಾಜ್ಯದ 'ಗ್ರಾಮ ಸಹಾಯಕ'ರಿಗೆ ಸಿಹಿಸುದ್ದಿ

ರಾಜ್ಯದ ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ಮಾಸಿಕ ಮಿತ ವೇತನವನ್ನು ರೂ.13,000ರಿಂದ ರೂ.15,000ಕ್ಕೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ.
09:02 PM Mar 05, 2024 IST | Ashitha S
ರಾಜ್ಯದ  ಗ್ರಾಮ ಸಹಾಯಕ ರಿಗೆ ಸಿಹಿಸುದ್ದಿ

ಬೆಂಗಳೂರು: ರಾಜ್ಯದ ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ಮಾಸಿಕ ಮಿತ ವೇತನವನ್ನು ರೂ.13,000ರಿಂದ ರೂ.15,000ಕ್ಕೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ.

Advertisement

ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರದೀಪ್ ಕುಮಾರ್ ನಡವಳಿಯನ್ನು ಹೊರಡಿಸಿದ್ದು, ಕಂದಾಯ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ 9903 ಗ್ರಾಮ ಸಹಾಯಕರ ಮಾಸಿಕ ಮಿತಿ ವೇತನವನ್ನು ದಿನಾಂಕ 01-04-2024ರಿಂದ ಅನ್ವಯವಾಗುವಂತೆ ಮಾಸಿಕ ರೂ.13,000ಗಳಿಂದ ರೂ.15,000ಗಳಿಗೆ ಹೆಚ್ಚಿಸಿ ಆದೇಶಿಸಿದೆ.

ಇನ್ನೂ ಇದಕ್ಕೆ ತಗಲುವ ವೆಚ್ಚವನ್ನು ಲೆಕ್ಕ ಶೀರ್ಷಿಕೆ 2029-101-1-01-Revenue Divisions-034-Contract/Outsource ರ ಅಡಿಯಲ್ಲಿ ಭರಿಸುವಂತೆ ಸೂಚಿಸಿದೆ. ಅಲ್ಲದೇ ಈ ಆದೇಶವನ್ನು ಆರ್ಥಿಕ ಇಲಾಖೆಯು ದಿನಾಂಕ 27-02-2024ರಲ್ಲಿ ನೀಡಿರುವ ಸಹಮತಿಯ ಮೇರೆಗೆ ಹೊರಡಿಸಲಾಗಿದೆ ಎಂದಿದ್ದಾರೆ.

Advertisement

Advertisement
Tags :
Advertisement