For the best experience, open
https://m.newskannada.com
on your mobile browser.
Advertisement

ಕೇಂದ್ರ ಸರ್ಕಾರದಿಂದ ಬಜೆಟ್‌ ನಲ್ಲಿ ಮಹಿಳೆಯರಿಗೆ ಬಂಪರ್‌ ಗಿಫ್ಟ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸುತಿದ್ದಾರೆ. ಪ್ರಧಾನಿ  ಮೋದಿ ಸರ್ಕಾರ 2024ರ ಕೇಂದ್ರ ಬಜೆಟ್‌ನಲ್ಲಿ ಮಹಿಳೆಯರ ಅಭಿವೃದ್ಧಿಗೆ ವಿಶೇಷ ಕೊಡುಗೆಗಳನ್ನು ನೀಡುವ ಭರವಸೆ ನೀಡಿದೆ. ದೇಶದ ಮಹಿಳೆಯರ ಆರ್ಥಿಕ ಶಕ್ತಿ, ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, 3 ಕೋಟಿ ಮಹಿಳಾ ಲಕ್ಷಾಧಿಪತಿಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ.
12:28 PM Feb 01, 2024 IST | Ashitha S
ಕೇಂದ್ರ ಸರ್ಕಾರದಿಂದ ಬಜೆಟ್‌ ನಲ್ಲಿ ಮಹಿಳೆಯರಿಗೆ ಬಂಪರ್‌ ಗಿಫ್ಟ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸುತಿದ್ದಾರೆ. ಪ್ರಧಾನಿ  ಮೋದಿ ಸರ್ಕಾರ 2024ರ ಕೇಂದ್ರ ಬಜೆಟ್‌ನಲ್ಲಿ ಮಹಿಳೆಯರ ಅಭಿವೃದ್ಧಿಗೆ ವಿಶೇಷ ಕೊಡುಗೆಗಳನ್ನು ನೀಡುವ ಭರವಸೆ ನೀಡಿದೆ. ದೇಶದ ಮಹಿಳೆಯರ ಆರ್ಥಿಕ ಶಕ್ತಿ, ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, 3 ಕೋಟಿ ಮಹಿಳಾ ಲಕ್ಷಾಧಿಪತಿಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ.

Advertisement

2024ರ ಬಜೆಟ್‌ ಮಂಡನೆಯಲ್ಲಿ ಮಹಿಳೆಯರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ದೇಶದಲ್ಲಿ ಈಗಾಗಲೇ ಒಂದು ಕೋಟಿ ಲಕ್‌ಪತಿ ದೀದಿಗಳು ಆಗಿದ್ದಾರೆ. ಇನ್ನೂ ಹೊಸದಾಗಿ 3 ಕೋಟಿ ಲಕ್‌ಪತಿ ದೀದಿಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ದೇಶದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಆಶಾ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆರೋಗ್ಯ ಕಾಳಜಿಯನ್ನು ಸರ್ಕಾರ ವಹಿಸಲಿದೆ ಎಂಬುದಾಗಿ ಹೇಳಿದರು.

Advertisement

ಉದ್ಯಮಶೀಲತೆ, ಸುಗಮ ಜೀವನ ಮತ್ತು ಘನತೆಯ ಮೂಲಕ ಮಹಿಳಾ ಸಬಲೀಕರಣವು ಕಳೆದ 10 ವರ್ಷಗಳಲ್ಲಿ ವೇಗವನ್ನು ಪಡೆದುಕೊಂಡಿದೆ. ಮಹಿಳಾ ಉದ್ಯಮಿಗಳಿಗೆ 30 ಕೋಟಿ ಮುದ್ರಾ ಯೋಜನೆ ಸಾಲ ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ ಮಹಿಳಾ ದಾಖಲಾತಿ 10 ವರ್ಷಗಳಲ್ಲಿ 28% ಹೆಚ್ಚಾಗಿದೆ ಸ್ಟೆಮ್ ಕೋರ್ಸ್ಗಳಲ್ಲಿ, ಬಾಲಕಿಯರು ಮತ್ತು ಮಹಿಳೆಯರು ದಾಖಲಾತಿಯಲ್ಲಿ 43% ರಷ್ಟಿದ್ದಾರೆ, ಇದು ವಿಶ್ವದಲ್ಲೇ ಅತಿ ಹೆಚ್ಚು. ಇವೆಲ್ಲವೂ ಕಾರ್ಯಪಡೆಯಲ್ಲಿ ಮಹಿಳೆಯರ ಹೆಚ್ಚುತ್ತಿರುವ ಭಾಗವಹಿಸುವಿಕೆಯಲ್ಲಿ ಪ್ರತಿಬಿಂಬಿತವಾಗಿವೆ ಎಂದರು.

ಸರ್ಕಾರದ ಗಮನವು ಜಿಡಿಪಿ ಮೇಲೆ ಇದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಹೇಳಿದರು. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ ಎಂಬುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದರು.

Read More: 

1.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಆರಂಭ: ಇಲ್ಲಿದೆ ಹೈಲೆಟ್ಸ್‌

Advertisement
Tags :
Advertisement