For the best experience, open
https://m.newskannada.com
on your mobile browser.
Advertisement

"ಮಹಾಲಕ್ಷ್ಮಿ ಯೋಜನೆ": ಯಜಮಾನಿಯರಿಗೆ ಪ್ರತಿ ವರ್ಷ 1 ಲಕ್ಷ ಹಣ ಖಾತೆಗೆ ಜಮಾ

ಯಜಮಾನಿಯರಿಗೆ ಕಾಂಗ್ರೆಸ್ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಪ್ರತಿ ವರ್ಷ 1ಲಕ್ಷ ಹಣ ಖಾತೆಗೆ ಜಮಾ ಮಾಡುವುದಾಗಿ ಘೋಷಿಸಿದೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಟಿ ನಡೆಸಿ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದರು.
01:21 PM Mar 15, 2024 IST | Ashitha S
 ಮಹಾಲಕ್ಷ್ಮಿ ಯೋಜನೆ   ಯಜಮಾನಿಯರಿಗೆ ಪ್ರತಿ ವರ್ಷ 1 ಲಕ್ಷ ಹಣ ಖಾತೆಗೆ ಜಮಾ

ಬೆಂಗಳೂರು: ಯಜಮಾನಿಯರಿಗೆ ಕಾಂಗ್ರೆಸ್ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಪ್ರತಿ ವರ್ಷ 1ಲಕ್ಷ ಹಣ ಖಾತೆಗೆ ಜಮಾ ಮಾಡುವುದಾಗಿ ಘೋಷಿಸಿದೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಟಿ ನಡೆಸಿ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದರು.

Advertisement

ಇದೀಗ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಮಹಿಳೆಯರ ಮಹಾಲಕ್ಷ್ಮಿ ಯೋಜನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದ ಮೂಲಕ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ ದೇಶದ ಬಡಕುಟುಂಬಗಳ ಯಜಮಾನಿಯರಿಗೆ ತಲಾ ರೂ.1 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ. ಇದಕ್ಕೆ ನಮ್ಮ ಸರ್ಕಾರದ ಸಾಧನೆಗಳು ಸಾಕ್ಷಿ ಎಂದಿದ್ದಾರೆ.

Advertisement

ದೇಶಾದ್ಯಂತ ಆರ್ಥಿಕವಾಗಿ ಹಿ೦ದುಳಿದಿರುವ ಕುಟು೦ಬಗಳ ಮಹಿಳೆಯರಿಗೆ ಪ್ರತಿ ವರ್ಷ ₹1 ಲಕ್ಷ ಹಣಕಾಸಿನ ನೆರವು ನೀಡಲಾಗುತ್ತಿದೆ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ಹಣ ಜಮೆ ಮಾಡಲಾಗುತ್ತಿದೆ. ನಿಮ್ಮ ಒ೦ದು ಮತದಿ೦ದ ಸಮಸಮಾಜ ನಿರ್ಮಾಣದ ಗ್ಯಾರಂಟಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Advertisement
Tags :
Advertisement