ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ: ಹವಮಾನ ಇಲಾಖೆ

ಸಿಲಿಕಾನ್​ ಸಿಟಿ ಮಂದಿಗೆ ಮತ್ತೆ ಮಳೆರಾಯ ತಂಪೆರೆದಿದ್ದಾನೆ. ದಿಢೀರ್​ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ಬೆಂಗಳೂರು ಸೇರಿದಂತೆ ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
06:03 PM May 08, 2024 IST | Ashika S

ಬೆಂಗಳೂರು:  ಸಿಲಿಕಾನ್​ ಸಿಟಿ ಮಂದಿಗೆ ಮತ್ತೆ ಮಳೆರಾಯ ತಂಪೆರೆದಿದ್ದಾನೆ. ದಿಢೀರ್​ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ಬೆಂಗಳೂರು ಸೇರಿದಂತೆ ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಮೇ 13 ಹಾಗೂ 14ರಂದು ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ.

ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದ್ದು, ಸತತ ಏಳು ದಿನ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Advertisement

ಇನ್ನು,  ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಬುಧವಾರದಿಂದಲೇ ಮಳೆ ಆರಂಭಗೊಳ್ಳಲಿದ್ದು, ನಂತರದ ದಿನಗಳಲ್ಲಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದೆ ಅಂತ ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಕೆ.ಆರ್ ಸರ್ಕಲ್, ಜೆಸಿ ರಸ್ತೆ, ಮೈಸೂರ್ ಬ್ಯಾಂಕ್ ಸರ್ಕಲ್, ಕೆ.ಆರ್​.ಮಾರ್ಕೆಟ್, ಯಲಹಂಕ, ನೆಲಮಂಗಲ ಸೇರಿದಂತೆ ಹಲವೆಡೆ ಬಿರು ಗಾಳಿ, ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ.

Advertisement
Tags :
bengaluruIMDLatetsNewsNewsKarnatakaRAINFALL
Advertisement
Next Article