For the best experience, open
https://m.newskannada.com
on your mobile browser.
Advertisement

ಲೋಕಸಭೆ ಚುನಾವಣೆ; ಕಾಂಗ್ರೆಸ್​ ನ ಮತ್ತೊಂದು ವಿಕೆಟ್‌ ಪತನ

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಮತ್ತೊಂದು ಶಾಕ್ ಎದುರಾಗಿದೆ. ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಸಂದರ್ಭದಲ್ಲಿ ಗೌರವ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸುದೀರ್ಘ ಪತ್ರವನ್ನೂ ಬರೆದಿದ್ದಾರೆ.
10:09 AM Apr 04, 2024 IST | Ashitha S
ಲೋಕಸಭೆ ಚುನಾವಣೆ  ಕಾಂಗ್ರೆಸ್​ ನ ಮತ್ತೊಂದು ವಿಕೆಟ್‌ ಪತನ

ವದೆಹಲಿ : ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಮತ್ತೊಂದು ಶಾಕ್ ಎದುರಾಗಿದೆ. ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಸಂದರ್ಭದಲ್ಲಿ ಗೌರವ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸುದೀರ್ಘ ಪತ್ರವನ್ನೂ ಬರೆದಿದ್ದಾರೆ.

Advertisement

ನಾನು ಪಕ್ಷಕೆ ಸೇರಿದಂದಿನಿಂದ ಅಂದಿನ ಕಾಂಗ್ರೆಸ್‌ಗೂ ಈಗಿನ ಕಾಂಗ್ರೆಸ್‌ಗೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ ನಾನು ಹುಟ್ಟಿನಿಂದಲೂ ಹಿಂದೂ ಹಾಗಾಗಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಲು ನನ್ನಿಂದ ಸಾಧ್ಯವಿಲ್ಲ ಜೊತೆಗೆ ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿಚಾರವಾಗಿ ಕಾಂಗ್ರೆಸ್ ನಡೆದುಕೊಂಡ ರೀತಿಯೂ ನನಗೆ ಸಹಿಸಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ ಈ ಎಲ್ಲ ವಿಚಾರಗಳಿಗೆ ಸಂಬಂಧಿಸಿ ನಾನು ಕಾಂಗ್ರೆಸ್ ಪಕ್ಷವನ್ನು ತೊರೆಯುವುದಾಗಿ ರಾಜೀನಾಮೆ ಪತ್ರದಲ್ಲಿ ಬರೆದುಕೊಂಡಿದ್ದಾರೆ.

Advertisement
Advertisement
Tags :
Advertisement