ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಎಂಎಂ ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಕೇಸ್: ವಿಶೇಷ ಕೋರ್ಟ್​ಗೆ ಸಿಎಂ ಸೂಚನೆ

ಎಂ ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ವಿಶೇಷ ನ್ಯಾಯಾಲಯ ರಚನೆ ಜೊತೆ ಪೂರ್ಣವಧಿ ನ್ಯಾಯಾಧೀಶರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಬಗ್ಗೆ ಸರ್ಕಾರದ ಅಪಾರ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಮೂಲಕ ಸೂಚಿಸಿದ್ದಾರೆ.
02:49 PM Dec 06, 2023 IST | Ashitha S

ಬೆಂಗಳೂರು: ಎಂ ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ವಿಶೇಷ ನ್ಯಾಯಾಲಯ ರಚನೆ ಜೊತೆ ಪೂರ್ಣವಧಿ ನ್ಯಾಯಾಧೀಶರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಬಗ್ಗೆ ಸರ್ಕಾರದ ಅಪಾರ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಮೂಲಕ ಸೂಚಿಸಿದ್ದಾರೆ.

Advertisement

ಬಲಪಂಥೀಯ ಸಿದ್ಧಾಂತಗಳನ್ನು ವಿರೋಧಿಸುತ್ತಾ ತಮ್ಮದೇ ಸಾಮಾಜಿಕ ಹೋರಾಟಗಳನ್ನು ಮಾಡುತ್ತಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಕನ್ನಡ ಸಾಹಿತ್ಯ ಸಂಶೋಧಕ ಎಂ.ಎಂ. ಕಲಬುರ್ಗಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇನ್ನು ಹತ್ಯೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದ್ದರೂ, ಹತ್ಯೆಗೆ ಯಾರು ಸುಪಾರಿ ಕೊಟ್ಟಿದ್ದು ಯಾವ ಉದ್ದೇಶಕ್ಕಾಗಿ ಕೊಲೆ ಮಾಡಲಾಗಿದೆ ಎನ್ನುವ ಸತ್ಯಾಂಶ ತಿಳಿದುಬಂದಿಲ್ಲ.

ಅಲ್ಲದೇ ಹಲವು ವರ್ಷಗಳಿಂದ ಈ ಪ್ರಕರಣ ನಿಧಾನಗತಿಯಲ್ಲಿ ವಿಚಾರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

Advertisement

ಎಂಎಂ ಕಲಬುರ್ಗಿ ಅವರನ್ನು 2015 ಆಗಸ್ಟ್ 31ರಂದು ಧಾರವಾಡದ ಅವರ ಸ್ವಗೃಹದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಆದರೆ, ಏಳು ವರ್ಷಗಳು ಪೂರ್ಣಗೊಂಡಿವೆ. ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಕೆಯಾಗಿದ್ದು, ಮೃತರ ಕುಟುಂಬದವರ ವಿಚಾರಣೆಗಳು ಪೂರ್ಣಗೊಂಡಿದ್ದರೂ ನ್ಯಾಯಾಲಯದಲ್ಲಿ ವಿಚಾರಣೆಗಳು ಮುಂದುವರೆದಿವೆ.

ಇನ್ನು ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ ಅವರನ್ನು 2017, ಸೆಪ್ಟೆಂಬರ್ 05 ರಂದು ಗುಂಡಿಕ್ಕಿ ಹತ್ಯೆಗೀಡಾಗಿದ್ದು, ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಇದುವರೆಗೂ 18 ಆರೋಪಿಗಳು ಬಂಧನಕ್ಕೊಳಗಾಗಿದ್ದು, 1200 ಪುರಾವೆ ಹಾಗೂ 500 ಕ್ಕೂ ವಿವಿಧ ಬಗೆಯ ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್‌ ಶೀಟ್‌ನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಇದರ ತನಿಖೆಯು ನಿಧಾನಗತಿಯಲ್ಲಿ ಸಾಗಿದೆ. ಹೀಗಾಗಿ ಈ ಬಗ್ಗೆ ಜರೂರು ಅಗತ್ಯ ಕ್ರಮವಹಿಸಲು ಸಿದ್ದರಾಮಯ್ಯ ಸೂಚನೆ ಹೊರಡಿಸಿದ್ದಾರೆ.

 

 

Advertisement
Tags :
GOVERNMENTindiaLatestNewsNewsKannadaಎಂಎಂ ಕಲಬುರ್ಗಿಕರ್ನಾಟಕಗೌರಿ ಲಂಕೇಶ್ನವದೆಹಲಿಸಿದ್ದರಾಮಯ್ಯ
Advertisement
Next Article