ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯ ಸರ್ಕಾರಿ ನೌಕರರಿಗೆ ಗುಡ್​ನ್ಯೂಸ್: ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ

ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇಕಡಾ 38.75 ರಿಂದ ಶೇಕಡಾ 42.5 ಕ್ಕೆ ಪರಿಷ್ಕರಿಸಲು ಅನುಮೋದಿಸಿದೆ. ಕೇಂದ್ರೀಯ ವೇತನ ಶ್ರೇಣಿಯಲ್ಲಿರುವವರಿಗೆ ಇದು 46% ರಿಂದ 50% ಕ್ಕೆ ಏರಿದೆ.
04:15 PM Mar 12, 2024 IST | Ashitha S

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇಕಡಾ 38.75 ರಿಂದ ಶೇಕಡಾ 42.5 ಕ್ಕೆ ಪರಿಷ್ಕರಿಸಲು ಅನುಮೋದಿಸಿದೆ. ಕೇಂದ್ರೀಯ ವೇತನ ಶ್ರೇಣಿಯಲ್ಲಿರುವವರಿಗೆ ಇದು 46% ರಿಂದ 50% ಕ್ಕೆ ಏರಿದೆ.

Advertisement

ಈ ಬದಲಾವಣೆಯು ಪ್ರತಿ ವರ್ಷ 1792.71 ಕೋಟಿ ರೂಪಾಯಿಗಳ ಗಮನಾರ್ಹ ಆರ್ಥಿಕ ಬದ್ಧತೆಯನ್ನು ಪ್ರತಿನಿಧಿಸುತ್ತದೆ. ನಮ್ಮ ಉದ್ಯೋಗಿಗಳಿಗೆ ನಮ್ಮ ಸಮರ್ಪಣೆಯನ್ನು ಪುನರುಚ್ಚರಿಸುತ್ತದೆ ಎಂದು ಸಿಎಂ ಕಚೇರಿ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡಾ 38.75 ರಿಂದ ಶೇಕಡಾ 42.5ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಖಾರವು ಹರ್ಷಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advertisement

 

Advertisement
Tags :
bengaluruindiaLatestNewsNewsKannadaಬೆಂಗಳೂರುಸಿದ್ದರಾಮಯ್ಯ
Advertisement
Next Article