ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲಾರಿ ಮಾಲಕರ ಸಂಕಷ್ಟಕ್ಕೆ ಸರಕಾರ ಸ್ಪಂದಿಸಬೇಕಿದೆ: ಶಾಸಕ ಭರತ್ ಶೆಟ್ಟಿ

'ಉದ್ಯಮ ವಲಯ ಚೇತರಿಸುತ್ತಿದ್ದರೂ ಲಾರಿ ಮಾಲಕರು ಇನ್ನೂ ಸಂಕಷ್ಟದಲ್ಲಿಯೇ ಇರುವುದು ವಿಪರ್ಯಾಸ. ಲಾರಿ ವ್ಯವಹಾರ ನಷ್ಟದಲ್ಲಿಯೇ ಮುಂದುವರಿಯಬಾರದು. ಸರಕಾರ ಲಾರಿ ಮಾಲಕರ ಸಂಕಷ್ಟಗಳಿಗೆ ಸ್ಪಂದಿಸಬೇಕಿದೆ' ಎಂದು ಶಾಸಕ ಡಾ| ವೈ. ಭರತ್ ಶೆಟ್ಟಿ ಹೇಳಿದರು.
03:58 PM Nov 02, 2023 IST | Ashika S

ಮಂಗಳೂರು: 'ಉದ್ಯಮ ವಲಯ ಚೇತರಿಸುತ್ತಿದ್ದರೂ ಲಾರಿ ಮಾಲಕರು ಇನ್ನೂ ಸಂಕಷ್ಟದಲ್ಲಿಯೇ ಇರುವುದು ವಿಪರ್ಯಾಸ. ಲಾರಿ ವ್ಯವಹಾರ ನಷ್ಟದಲ್ಲಿಯೇ ಮುಂದುವರಿಯಬಾರದು. ಸರಕಾರ ಲಾರಿ ಮಾಲಕರ ಸಂಕಷ್ಟಗಳಿಗೆ ಸ್ಪಂದಿಸಬೇಕಿದೆ' ಎಂದು ಶಾಸಕ ಡಾ| ವೈ. ಭರತ್ ಶೆಟ್ಟಿ ಹೇಳಿದರು.

Advertisement

ಅವರು ನ.2 ರ ಗುರುವಾರ ಕುಳಾಯಿಯಲ್ಲಿ ದಕ್ಷಿಣ ಕನ್ನಡ ಟ್ರಕ್ ಓನರ್ಸ್ ಅಸೋಸಿಯೇಷನ್ (ರಿ.) ಇದರ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಜಿಂದಾಲ್ ಮಂಗಳೂರು ಕಲ್ಲಿದ್ದಲು ಘಟಕ ಮುಖ್ಯಸ್ಥ ಎಲ್. ರಾಮನಾಥನ್ ಮಾತನಾಡಿ 'ಲಾರಿ ಮಾಲಕರ ಹಿತಕ್ಕಾಗಿ ಸಂಘಟನೆಯ ಶ್ರಮ ಪ್ರಸಂಶನೀಯ. ಮಂಗಳೂರು ಕೋಲ್ ಪ್ಲಾಂಟ್ ನಿಂದ ಮುಂದೆಯೂ ಲಾರಿ ಮಾಲಕರ ಅಗತ್ಯಗಳನ್ನು ಪೂರೈಸಲಾಗುವುದು' ಎಂದರು.

Advertisement

ಸಂಘದ ಅಧ್ಯಕ್ಷ ಸುಶಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪಣಂಬೂರು ಉಪ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ನಾಯ್ಕ್, ಸಾರಿಗೆ ಉದ್ಯಮಿ ನಿತ್ಯಾನಂದ ಶೆಟ್ಟಿ, ಉದ್ಯಮಿ ಹಾಗೂ ಸಂಘದ ಗೌರವಾಧ್ಯಕ್ಷ ಸುಜಿತ್ ಆಳ್ವ, ಸಂಘದ ಸಲಹೆಗಾರ ಬಿ.ಎಸ್. ಚಂದ್ರು ಮಾತನಾಡಿ ಶುಭ ಹಾರೈಸಿದರು. ಪ್ರಧಾನ ಕಾರ್ಯದರ್ಶಿ ಸುನಿಲ್ ಡಿಸೋಜಾ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಹಾರಿಸ್ ಹೊಸ್ಮಾರ್ ನಿರೂಪಿಸಿ ವಂದಿಸಿದರು.

Advertisement
Tags :
LatetsNewsNewsKannadaಡಾ. ವೈ. ಭರತ್‌ ಶೆಟ್ಟಿಮಾಲಕರುಲಾರಿಸಂಕಷ್ಟ
Advertisement
Next Article