ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉಪ್ಪಿನಂಗಡಿ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪದವಿ ವಿದ್ಯಾರ್ಥಿ

ಕಾಲೇಜು ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉಪ್ಪಿನಂಗಡಿ ಬಳಿಯ ಪೆರಿಯಡ್ಕ್ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ.
06:15 PM Feb 15, 2024 IST | Gayathri SG

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉಪ್ಪಿನಂಗಡಿ ಬಳಿಯ ಪೆರಿಯಡ್ಕ್ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ.

Advertisement

ಅತಾವುಲ್ಲಾ ಮಡಂತ್ಯಾರಿನ ಕಾಲೇಜು ಒಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, ಕಳೆದ ಒಂದೂವರೆ ತಿಂಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದ ಎಂದು ಹೇಳಲಾಗಿದೆ. ಅತ್ತಾವುಲ್ಲಾ ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದು, ಫೆಬ್ರವರಿ 14 ರಂದು ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಆದ್ರೆ ವಾಪಸ್ಸು ಮನೆಗೆ ಬಂದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ.

ಈತ ಯಾವುದೋ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಹೊರತು ಆತನ ಮರಣದಲ್ಲಿ ಯಾವುದೇ ಸಂಶಯ ಇರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. . ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

Advertisement
Tags :
LatestNewsNewsKannadaಉಪ್ಪಿನಂಗಡಿವಿದ್ಯಾರ್ಥಿ
Advertisement
Next Article