ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಡಗನ್ನೂರು ಗ್ರಾ. ಪಂ. ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ನಿಧನ

ಇಲ್ಲಿನ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಮಾಡಿ(45ವ.)ರವರು ದಿಢೀ‌ರ್ ಅಸ್ವಸ್ಥಗೊಂಡು ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.
11:26 AM Dec 10, 2023 IST | Ashika S

ಬಡಗನ್ನೂರು: ಇಲ್ಲಿನ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಮಾಡಿ(45ವ.)ರವರು ದಿಢೀ‌ರ್ ಅಸ್ವಸ್ಥಗೊಂಡು ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.

Advertisement

ದ.8ರಂದು ಮೈಂದನಡ್ಕದಲ್ಲಿ ನಡೆದಿದ್ದ ವಾಲಿಬಾಲ್ ಪಂದ್ಯಾಟವೊಂದರಲ್ಲಿ ಭಾಗವಹಿಸಿ ರಾತ್ರಿ ಮನೆಗೆ ಹೋಗಿದ್ದ ಇವರು ದಿಢೀ‌ರ್ ರಕ್ತವಾಂತಿ ಮಾಡಲಾರಂಭಿಸಿದ್ದರು. 9ರಂದು ಬೆಳಿಗ್ಗೆ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ 7 ಗಂಟೆ ಸುಮಾರಿಗೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಡಗನ್ನೂರು ಗ್ರಾಮ ಪಂಚಾಯತ್‌ನ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಒಂದು ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದ ಇವರು, ಕೋಟಿ ಚೆನ್ನಯ ಯುವಕ ಮಂಡಲ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು ಚಿರಪರಿಚಿತರಾಗಿದ್ದರು.

Advertisement

ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತರೂ ಆಗಿದ್ದರು.ಮೃತರು ತಾಯಿ ಕಸ್ತೂರಿ ರೈ, ನಾರಂಪಾಡಿಯಲ್ಲಿ ವಾಸವಿರುವ ಸಹೋದರ ತ್ಯಾಗರಾಜ್, ಮೈಸೂರಿನಲ್ಲಿ ಉದ್ಯೋಗದಲ್ಲಿರುವ ಸಹೋದರಿ ಸೌಮ್ಯ ಮತ್ತು ಬಾವನನ್ನು ಅಗಲಿದ್ದಾರೆ. ಕೆಲ ತಿಂಗಳ ಹಿಂದೆ ಗುರುಪ್ರಸಾದ್ ರೈ ಕುದ್ಮಾಡಿ ಅವರ ಮನೆಗೆ ದರೋಡೆಕೋರರು ನುಗ್ಗಿ ತಾಯಿ,ಮಗನನ್ನು ಕಟ್ಟಿ ಹಾಕಿ ನಗದು, ಚಿನ್ನಾಭರಣ ದರೋಡೆ ಮಾಡಿದ್ದರು.

ಇವರ ಅಂತ್ಯಕ್ರಿಯೆ ಇಂದು ಬೆಳಿಗ್ಗೆ ಕುದ್ಮಾಡಿ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Advertisement
Tags :
LatetsNewsNewsKannadaಅಸ್ವಸ್ಥಆಸ್ಪತ್ರೆಗುರುಪ್ರಸಾದ್ ರೈಗ್ರಾಮ ಪಂಚಾಯತ್ವೆನ್ಲಾಕ್
Advertisement
Next Article