ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ: 6 ನಕ್ಸಲರ ಹತ್ಯೆ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ (ಮಾ.27) ಭದ್ರತಾ ಸಿಬ್ಬಂದಿಗಳ ಎನ್‌ಕೌಂಟರ್‌ನಲ್ಲಿ ಮಹಿಳಾ ಕೇಡರ್ ಸೇರಿದಂತೆ ಆರು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
11:53 AM Mar 27, 2024 IST | Ashitha S

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ (ಮಾ.27) ಭದ್ರತಾ ಸಿಬ್ಬಂದಿಗಳ ಎನ್‌ಕೌಂಟರ್‌ನಲ್ಲಿ ಮಹಿಳಾ ಕೇಡರ್ ಸೇರಿದಂತೆ ಆರು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

ಬಸಗುಡ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕುರಭಟ್ಟಿ ಮತ್ತು ಪುಸ್ಬಾಕ ಗ್ರಾಮಗಳ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ರೇಂಜ್) ಸುಂದರರಾಜ್ ಪಿ ತಿಳಿಸಿದ್ದಾರೆ.

ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ (DRG), ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF), ಮತ್ತು ಅದರ ಗಣ್ಯ ಘಟಕ CoBRA (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಗೆ ಸೇರಿದ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.

Advertisement

Advertisement
Tags :
GOVERNMENTindiaKARNATAKALatestNewsಬೆಂಗಳೂರು
Advertisement
Next Article