ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜ್ಞಾನವಾಪಿ ಸರ್ವೇ ಮಾಡಲು ತೀರ್ಪು ನೀಡಿದ ನ್ಯಾಯಾಧೀಶರಿಗೆ ಬಂತು ಬೆದರಿಕೆ ಕರೆ

ವಾರಣಾಸಿಯ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ನೀಡಿದ ಸಿವಿಲ್ ನ್ಯಾಯಾಧೀಶ ರವಿ ದಿವಾಕರ್ ಅವರಿಗೆ ಅನಾಮಧೇಯ ನಂಬರ್‌ನಿಂದ ಬೆದರಿಕೆ ಕರೆಗಳು ಬರುತ್ತಿದೆ ಎಂದು ತಿಳಿದು ಬಂದಿದೆ.
04:12 PM Apr 25, 2024 IST | Ashitha S

ಬರೇಲಿ: ವಾರಣಾಸಿಯ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ನೀಡಿದ ಸಿವಿಲ್ ನ್ಯಾಯಾಧೀಶ ರವಿ ದಿವಾಕರ್ ಅವರಿಗೆ ಅನಾಮಧೇಯ ನಂಬರ್‌ನಿಂದ ಬೆದರಿಕೆ ಕರೆಗಳು ಬರುತ್ತಿದೆ ಎಂದು ತಿಳಿದು ಬಂದಿದೆ.

Advertisement

ಅಂತರಾಷ್ಟ್ರೀಯ ಸಂಖ್ಯೆಗಳಿಂದ ತನಗೆ ನಿರಂತರವಾಗಿ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಸಿವಿಲ್ ನ್ಯಾಯಾಧೀಶ ರವಿ ದಿವಾಕರ್ ಅವರು ಆರೋಪಿಸಿದ್ದು, ಜ್ಞಾನವಾಪಿಗೆ ಸಂಬಂಧಿಸಿದಂತೆ ನೀಡಿದ ತೀರ್ಪಿನ ನಂತರ ನಿರಂತರ ಕೊಲೆ ಬೆದರಿಕೆಗಳು ಬಂದಿದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅಲಹಾಬಾದ್ ಹೈಕೋರ್ಟ್ ಅವರಿಗೆ ಮತ್ತು ಅವರ ಕುಟುಂಬಕ್ಕೆ ವೈ ಕೆಟಗರಿ ಭದ್ರತೆ ನೀಡುವಂತೆ ಆದೇಶಿಸಿತ್ತು. ನಂತರ ಅದನ್ನು X ವರ್ಗಕ್ಕೆ ಇಳಿಸಲಾಗಿದೆ.

ಸದ್ಯ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶ ರವಿ ದಿವಾಕರ್ ಬರೇಲಿಯ ಎಸ್‌ಎಸ್‌ಪಿಗೆ ಪತ್ರ ಬರೆದಿದ್ದಾರೆ. ಕಳೆದ ಒಂದು ವಾರದಿಂದ ತನಗೆ ಅಂತಾರಾಷ್ಟ್ರೀಯ ಸಂಖ್ಯೆಗಳಿಂದ ಬೆದರಿಕೆ ಕರೆಗಳು ಬರುತ್ತಿದ್ದು, ಇದು ತುಂಬಾ ಆತಂಕಕಾರಿಯಾಗಿದೆ ಎಂದು ಅವರು ಹೇಳಿದ್ದಾರೆ. ಈ ಹಿನ್ನೆಲೆ ಪ್ರಸ್ತುತ ನ್ಯಾಯಾಧೀಶ ರವಿ ದಿವಾಕರ್ ಅವರ ರಕ್ಷಣೆಗೆ ಇಬ್ಬರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Advertisement

Advertisement
Tags :
BreakingNewsgyanvapi surveyindiaJUDGEKARNATAKALatestNewsNewsKannadaThreat Callಬೆಂಗಳೂರು
Advertisement
Next Article