For the best experience, open
https://m.newskannada.com
on your mobile browser.
Advertisement

ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋಗಿ ಜಿಮ್​​ ಟ್ರೈನರ್ ಸಾವು

ಪತ್ನಿಗೆ ವಿಡಿಯೋ ಕಾಲ್ ಮಾಡುತ್ತಲೇ ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
10:00 AM May 16, 2024 IST | Ashitha S
ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋಗಿ ಜಿಮ್​​ ಟ್ರೈನರ್ ಸಾವು

ಬೆಂಗಳೂರು: ಪತ್ನಿಗೆ ವಿಡಿಯೋ ಕಾಲ್ ಮಾಡುತ್ತಲೇ ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

Advertisement

ಅಮಿತ್ ಒಂದು ವರ್ಷದ ಹಿಂದೆ ಜಿಮ್ ಸಮೀಪವೇ ವಾಸವಿದ್ದ ಯುವತಿಯನ್ನು ಪ್ರೀತಿಸಿ ಮದುವೆ ಆಗಿದ್ದರು. ಪೋಷಕರ ವಿರೋಧದ ನಡುವೆಯೂ ಅಮಿತ್ ಕುಮಾರ್ ವಿವಾಹ ನಡೆದಿತ್ತು.

ಪತ್ನಿ ನರ್ಸಿಂಗ್ ಕೋರ್ಸ್​ಗೆ ಸೇರಿದ ಬಳಿಕ ಪತಿಗೆ ಸಮಯ ನೀಡ್ತಿರಲಿಲ್ಲ. ಇದೇ ವಿಚಾರಕ್ಕೆ ಆಗಾಗ ಪತಿ-ಪತ್ನಿ ನಡುವೆ ಗಲಾಟೆ ಆಗುತ್ತಿತ್ತು. ವೈಮನಸ್ಸು ಜೋರಾದ ಹಿನ್ನೆಲೆಯಲ್ಲಿ ಪತಿಯನ್ನು ತೊರೆದು ಪತ್ನಿ ಬೇರೆಡೆ ವಾಸವಿದ್ದಳು. ಆಗ ಮನೆಗೆ ವಾಪಸ್ ಬರುವಂತೆ ಪದೇ ಪದೇ ಕರೆ ಮಾಡಿ ಅಮಿತ್ ಮನವಿ ಮಾಡಿಕೊಂಡಿದ್ದರಂತೆ.

Advertisement

ಅಂತೆಯೇ ನಿನ್ನೆಯ ದಿನ ಬಾಗಲಗುಂಟೆಯಲ್ಲಿನ ನಿವಾಸದಲ್ಲಿದ್ದ ಅಮಿತ್​ ಆಕೆಗೆ ಮತ್ತೊಮ್ಮೆ ಫೋನ್ ಮಾಡಿದ್ದಾರೆ. ನೀನು ಬರದಿದ್ದರೆ ನೇಣು ಬಿಗಿದುಕೊಂಡು ಸಾಯುತ್ತೇನೆ ಎಂದು ಹೆದರಿಸಿದ್ದಾರೆ. ಖುರ್ಚಿ ಮೇಲೆ ನಿಂತು ನೇಣು ಬಿಗಿದುಕೊಂಡು ಪತ್ನಿಗೆ ವಿಡಿಯೋ ಕಾಲ್ ಮಾಡಿದ್ದರು. ಈ ವೇಳೆ ಮೊಬೈಲ್ ಕೈಯಿಂದ ತಪ್ಪಿ ನೆಲಕ್ಕೆ ಬಿದ್ದಿದೆ. ಆಗ ಮೊಬೈಲ್ ಹಿಡಿದುಕೊಳ್ಳಲು ಪ್ರಯತ್ನಿಸುತ್ತಿರುವಾಗ ಖುರ್ಚಿಯಿಂದ ಕಾಲು ಜಾರಿ ನೇಣು ಬಿಗಿದಿದೆ ಎಂದು ವರದಿಯಾಗಿದೆ. ಸದ್ಯ ಈ ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Tags :
Advertisement