ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕದನ ವಿರಾಮ: 4ನೇ ಹಂತದಲ್ಲಿ 11 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್‌

ಜೆರುಸಲೇಂ: ಕದನ ವಿರಾಮ ಒಪ್ಪಂದದಂತೆ 4ನೇ ಹಂತದಲ್ಲಿ 11 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ಬಂಡುಕೋರರು ಬಿಡುಗಡೆ ಮಾಡಿದ್ದಾರೆ. ಒತ್ತೆಯಾಳುಗಳನ್ನು ಗಾಜಾಪಟ್ಟಿಯಲ್ಲಿರುವ ರೆಡ್ಕ್ರಾಸ್ ಪ್ರತಿನಿಧಿಗಳಿಗೆ ಒಪ್ಪಿಸಲಾಗಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ದೃಢಪಡಿಸಿದೆ.
01:31 PM Nov 28, 2023 IST | Ashitha S

ಜೆರುಸಲೇಂ: ಕದನ ವಿರಾಮ ಒಪ್ಪಂದದಂತೆ 4ನೇ ಹಂತದಲ್ಲಿ 11 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ಬಂಡುಕೋರರು ಬಿಡುಗಡೆ ಮಾಡಿದ್ದಾರೆ. ಒತ್ತೆಯಾಳುಗಳನ್ನು ಗಾಜಾಪಟ್ಟಿಯಲ್ಲಿರುವ ರೆಡ್ಕ್ರಾಸ್ ಪ್ರತಿನಿಧಿಗಳಿಗೆ ಒಪ್ಪಿಸಲಾಗಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ದೃಢಪಡಿಸಿದೆ.

Advertisement

ಕದನ ವಿರಾಮ ಘೋಷಣೆಯ 4ನೇ ದಿನವಾದ ಸೋಮವಾರ ಈ ಪ್ರಕ್ರಿಯೆ ನಡೆದಿದೆ. 'ಒಪ್ಪಂದದಂತೆ ನಿನ್ನೆ 11 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಕೂಡ 33 ಮಂದಿ ಪ್ಯಾಲೆಸ್ಟೀನಿ ಕೈದಿಗಳನ್ನು ಬಿಡುಗಡೆ ಮಾಡಿದೆ' ಎಂದು ಕತಾರ್ನ ವಿದೇಶಾಂಗ ಸಚಿವಾಲಯದ ವಕ್ತಾರ ಮಜೀದ್ ಅಲ್ ಅನ್ಸಾರಿ ಅವರು ಹೇಳಿದ್ದಾರೆ.

ಇನ್ನು 2 ದಿನ ಕದನ ವಿರಾಮ ವಿಸ್ತರಣೆ ಈ ನಡುವೆ ಇಸ್ರೇಲ್ ಕದನದಲ್ಲಿ ಮತ್ತೆರಡು ದಿನಗಳ ಯುದ್ಧ ವಿರಾಮವನ್ನು ಘೋಷಣೆ ಮಾಡಲಾಗಿದೆ. ಈ ಮೊದಲಿನ ಒಪ್ಪಂದಂತೆ 4 ದಿನಗಳ ಕದನ ವಿರಾಮ ಸೋಮವಾರಕ್ಕೆ ಅಂತ್ಯವಾಗಬೇಕಿತ್ತು. ಆದರೆ, ಮಾನವೀಯತೆಯ ದೃಷ್ಟಿಯಿಂದ 2 ದಿನ ವಿಸ್ತರಣೆ ಮಾಡಲಾಗಿದೆ. ಈ ವೇಳೆ ಮತ್ತಷ್ಟು ಒತ್ತೆಯಾಳುಗಳನ್ನು ಉಭಯ ಬಣಗಳು ವಿನಿಮಯ ಮಾಡಿಕೊಳ್ಳಲಿವೆ.

Advertisement

ಈಗಾಗಲೇ 3ನೇ ದಿನ ಹಮಾಸ್ 17 ಜನರನ್ನು, ಇಸ್ರೇಲ್ 39 ಜನರನ್ನು ಬಿಡುಗಡೆ ಮಾಡಿದೆ. 2ನೇ ದಿನ ಹಮಾಸ್ 20 ಇಸ್ರೇಲಿಗರು, ಇಸ್ರೇಲ್ 39 ಪ್ಯಾಲೆಸ್ತೀನಿ ಕೈದಿಗಳನ್ನು ಬಿಡುಗಡೆ ಮಾಡಿದ್ದವು. ಮೂರನೇ ದಿನ 39 ಕೈದಿಗಳನ್ನು ಹಾಗೂ ಹಮಾಸ್ 24 ಮಂದಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ್ದವು.

Advertisement
Tags :
indiaLatestNewsNewsKannadaಇಸ್ರೇಲ್‌ಒತ್ತೆಯಾಳುಕದನ ವಿರಾಮನವದೆಹಲಿಹಮಾಸ್
Advertisement
Next Article