For the best experience, open
https://m.newskannada.com
on your mobile browser.
Advertisement

ನೇಹಾ ಕೊಲೆ ಪ್ರಕರಣ: ಆರೋಪಿಯನ್ನ ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್

ಧಾರವಾಡದಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು, ಸ್ಯಾಂಡಲ್​​ವುಡ್​ ತಾರೆಯರೂ ಸಹ ಈ ಘಟನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
12:47 PM Apr 20, 2024 IST | Ashika S
ನೇಹಾ ಕೊಲೆ ಪ್ರಕರಣ  ಆರೋಪಿಯನ್ನ ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್

ಬೆಂಗಳೂರು: ಧಾರವಾಡದಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು, ಸ್ಯಾಂಡಲ್​​ವುಡ್​ ತಾರೆಯರೂ ಸಹ ಈ ಘಟನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

Advertisement

ನಟಿ ರಚಿತಾ ರಾಮ್​ ಕೂಡ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೇಹಾ ಫೋಟೋ ಹಂಚುವ ಮೂಲಕ ನ್ಯಾಯಕ್ಕಾಗಿ ಧ್ವನಿ ಎತ್ತಿದ್ದಾರೆ.

ಜಾತಿ, ಧರ್ಮ ಯಾವುದೇ ಆಗಿರಲಿ ಮೊದಲು ನಾವು ಮಾನವರು. ನಾನು ಈ ಪೋಸ್ಟ್​ ಹಾಕಲು ಕಾರಣ ಆಕೆಗೆ ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ. ಸರ್ಕಾರಕ್ಕೆ ನನ್ನ ಮನವಿ! ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ #Wewantjustice ಎಂದು ಇನ್​​ಸ್ಟಾಗ್ರಾಂನ  ತಮ್ಮ ಖಾತೆಯಲ್ಲಿ  ಬರೆದುಕೊಂಡಿದ್ದಾರೆ.

Advertisement

Advertisement
Tags :
Advertisement