ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನೇಹಾ ಹಂತಕನನ್ನು ಗಲ್ಲಿಗೇರಿಸಿ : ಸಚಿವ ಎಂ.ಬಿ. ಪಾಟೀಲಾ

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲಾ ಆಗ್ರಹಿಸಿದರು.
09:15 PM Apr 20, 2024 IST | Nisarga K
ನೇಹಾ ಹಂತಕನನ್ನು ಗಲ್ಲಿಗೇರಿಸಿ : ಸಚಿವ ಎಂ.ಬಿ. ಪಾಟೀಲಾ

ಬೆಂಗಳೂರು: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲಾ ಆಗ್ರಹಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ʻಇಂತಹ ದುಷ್ಕೃತ ಎಸಗಿದವರಿಗೆ ತಕ್ಷಣವೇ ಕಠಿಣ ಶಿಕ್ಷೆ ಆಗಬೇಕು. ಈ ಹೇಯ ಪ್ರಕರಣದ ವಿಚಾರಣೆಯಲ್ಲಿ ವಿಳಂಬಕ್ಕೆ ಆಸ್ಪದವಾಗಬಾರದು. ಹೀಗಾಗಿ, ತ್ವರಿತ ನ್ಯಾಯಾಲಯ ಸ್ಥಾಪಿಸಬೇಕುʼ ಎಂದರು.

ʻಇಂತಹ ಘೋರ ದುಷ್ಕೃತ್ಯ ಎಸಗಿದವರಿಗೆ ಗಲ್ಲು ಶಿಕ್ಷೆಯಂಥ ಕಠಿಣ ಶಿಕ್ಷೆಯಾದರೆ ಮಾತ್ರ ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಗಟ್ಟಲು ಸಾಧ್ಯ; ಎಂದರು.

Advertisement

ʻಈ ಕೃತ್ಯ ಎಸಗಿದೆ ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಸರ್ಕಾರ ಗಮನಕೊಡಲಿದೆʼ ಎಂದ ಸಚಿವರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಇಂತಹ ಘೋರಕೃತ್ಯ ಎಸಗಿದವರನ್ನು ವಿಳಂಬವಿಲ್ಲ ಗಲ್ಲು ಶಿಕ್ಷೆಗೆ ಒಳಪಡಿಸಲು ಸಾಧ್ಯವಾಗುವಂತಹ ಕಾನೂನು ರೂಪಿಸುವ ಬಗ್ಗೆ ಸಮಾಲೋಚನೆ ನಡೆಸಬೇಕುʼ ಎಂದು ಅಭಿಪ್ರಾಯಪಟ್ಟರು.

ʻಚಿಕ್ಕವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲೂ ಅಪರಾಧಿಗಳಿಗೆ ಮರಣದಂಡನೆ ವಿಧಿಸಬೇಕುʼ ಎಂದೂ ಅವರು ಹೇಳಿದರು.

 

Advertisement
Tags :
bengalurucriminalhangingLatestNewsMBPatilMINISTERNeha HiremathNewsKarnataka
Advertisement
Next Article