For the best experience, open
https://m.newskannada.com
on your mobile browser.
Advertisement

ಹನುಮಾನ್ ಚಾಲೀಸಾ ಹಾಕಿಕೊಂಡು ರ‍್ಯಾಲಿ: ತೇಜಸ್ವಿ ಸೂರ್ಯ ಖಾಕಿ ವಶಕ್ಕೆ

ನಗರದ ನಗರ್ತಪೇಟೆಯಲ್ಲಿ ಹನುಮಾನ್ ಚಾಲೀಸಾ ಹಾಕಿಕೊಂಡು ರ್ಯಾಲಿ ಮಾಡುತ್ತಿರುವುದಕ್ಕೆ ಸಂಸದ ತೇಜಸ್ವಿ ಸೂರ್ಯ ಪ್ರಚೋದನೆಯೇ ಕಾರಣವೆಂದು ಕಾಂಗ್ರೆಸ್‌ನಿಂದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬೆನ್ನಲ್ಲಿಯೇ ಬೆಂಗಳೂರು ಪೊಲೀಸರು ಸಂಸದ ತೇಜಸ್ವಿ ಸೂರ್ಯರನ್ನು ವಶಕ್ಕೆ ಪಡೆದಿದ್ದಾರೆ.
02:38 PM Mar 19, 2024 IST | Ashitha S
ಹನುಮಾನ್ ಚಾಲೀಸಾ ಹಾಕಿಕೊಂಡು ರ‍್ಯಾಲಿ  ತೇಜಸ್ವಿ ಸೂರ್ಯ ಖಾಕಿ ವಶಕ್ಕೆ

ಬೆಂಗಳೂರು: ನಗರದ ನಗರ್ತಪೇಟೆಯಲ್ಲಿ ಹನುಮಾನ್ ಚಾಲೀಸಾ ಹಾಕಿಕೊಂಡು ರ್ಯಾಲಿ ಮಾಡುತ್ತಿರುವುದಕ್ಕೆ ಸಂಸದ ತೇಜಸ್ವಿ ಸೂರ್ಯ ಪ್ರಚೋದನೆಯೇ ಕಾರಣವೆಂದು ಕಾಂಗ್ರೆಸ್‌ನಿಂದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬೆನ್ನಲ್ಲಿಯೇ ಬೆಂಗಳೂರು ಪೊಲೀಸರು ಸಂಸದ ತೇಜಸ್ವಿ ಸೂರ್ಯರನ್ನು ವಶಕ್ಕೆ ಪಡೆದಿದ್ದಾರೆ.

Advertisement

ನಗರ್ತಪೇಟೆಯಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸ್ಥಳೀಯರ ಪ್ರತಿಭಟನೆಗೆ ಸಂಸದ ತೇಜಸ್ವಿ ಸೂರ್ಯ ಪ್ರಚೋದನೆ ನೀಡಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಕಾನೂನು ಘಟಕದಿಂದ ದೂರು ನೀಡಲಾಗಿದೆ.

ಇನ್ನು ದೂರು ದಾಖಲಾಗುತ್ತಿದ್ದಂತೆ ನಗರ್ತಪೇಟೆಯಲ್ಲಿ ಸ್ಥಳೀಯ ವ್ಯಾಪಾರಿಗಳು ನಡೆಸುತ್ತಿದ್ದ ಹನುಮಾನ್ ಚಾಲೀಸಾ ರ್ಯಾಲಿ ಕೈಬಿಡುವಂತೆ ಮನವೊಲಿಕೆಗೆ ಬಂದಿದ್ದರು. ಆದರೆ, ಪ್ರತಿಭಟನಾ ಸ್ಥಳಕ್ಕೆ ಬಂದ ಸಂಸದ ತೇಜಸ್ವಿ ಸೂರ್ಯನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

Advertisement
Tags :
Advertisement