For the best experience, open
https://m.newskannada.com
on your mobile browser.
Advertisement

ಹುಟ್ಟು ಹಬ್ಬದ ಸಂಭ್ರಮದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ

ಭಾರತ ಕ್ರಿಕೆಟ್ ತಂಡದ ನಾಯಕ ಹಿಟ್ಮ್ಯಾನ್ ರೋಹಿತ್ ಶರ್ಮ ಇಂದು ತಮ್ಮ 37ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ರೋಹಿತ್ ಶರ್ಮಾ 2007 ಜೂನ್ 23 ರಂದು ಭಾರತ ಮತ್ತು ಐರ್ಲೆಂಡ್ ನಡುವಣ ಏಕದಿನ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪ್ರವೇಶಿಸಿದರು. ವೀರೇಂದ್ರ ಸೆಹ್ವಾಗ್ ಅವರಂತೆ ಸ್ಪೋಟಕ ಬ್ಯಾಟಿಂಗ್ ಮಾಡುತ್ತಿದ್ದ ರೋಹಿತ್ ಶರ್ಮ ಅವರಿಗೆ ಓಪನಿಂಗ್ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿಯುವ ಅವಕಾಶ ಸಿಕ್ಕಿತು.
09:49 AM Apr 30, 2024 IST | Ashitha S
ಹುಟ್ಟು ಹಬ್ಬದ ಸಂಭ್ರಮದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ

ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ಹಿಟ್ಮ್ಯಾನ್ ರೋಹಿತ್ ಶರ್ಮ ಇಂದು ತಮ್ಮ 37ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ರೋಹಿತ್ ಶರ್ಮಾ ಹುಟ್ಟುಹಬ್ಬಕ್ಕೆ ಸಾಮಾಜಿಕ ತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಏಕದಿನ ಕ್ರಿಕೆಟ್​​ನಲ್ಲಿ ಮೂರು ಬಾರಿ ದ್ವಿಶತಕ ಸಿಡಿಸಿದ ವಿಶ್ವದ ಏಕೈಕ ಕ್ರಿಕೆಟಿಗ ಎಂಬ ಹೆಸರು ರೋಹಿತ್ ಅವರದ್ದು.

Advertisement

ರೋಹಿತ್ ಶರ್ಮಾ 2007 ಜೂನ್ 23 ರಂದು ಭಾರತ ಮತ್ತು ಐರ್ಲೆಂಡ್ ನಡುವಣ ಏಕದಿನ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪ್ರವೇಶಿಸಿದರು.

ವೀರೇಂದ್ರ ಸೆಹ್ವಾಗ್ ಅವರಂತೆ ಸ್ಪೋಟಕ ಬ್ಯಾಟಿಂಗ್ ಮಾಡುತ್ತಿದ್ದ ರೋಹಿತ್ ಶರ್ಮ ಅವರಿಗೆ ಓಪನಿಂಗ್ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿಯುವ ಅವಕಾಶ ಸಿಕ್ಕಿತು. ಏಕದಿನ ಕ್ರಿಕೆಟ್ ನಲ್ಲಿ 262 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ 10709ರನ್ ಬಾರಿಸಿದ್ದು, ಇದರಲ್ಲಿ 55 ಅರ್ಧ ಶತಕ ಮತ್ತು 31 ಶತಕಗಳಿವೆ. 2014ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 173 ಎಸೆತಗಳಲ್ಲಿ ಬರೋಬ್ಬರಿ 33 ಬೌಂಡರಿ ಹಾಗೂ 9 ಸಿಕ್ಸ್​ನೊಂದಿಗೆ 264 ರನ್ ಸಿಡಿಸಿ ತನ್ನದೇ ದಾಖಲೆಯನ್ನು ಪುಡಿ ಮಾಡಿದರು. ಜೊತೆಗೆ ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ ಅತ್ಯಂತ ಗರಿಷ್ಠ ರನ್ ಗಳಿಸಿದ ಮೊದಲ ಆಟಗಾರ ಎಂಬ ಸಾಧನೆಯನ್ನೂ ರೋಹಿತ್ ಮಾಡಿದರು.

Advertisement

ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಆರು ಬಾರಿ ಟ್ರೋಫಿ ಎತ್ತಿ ಹಿಡಿದ ಕೀರ್ತಿ ರೋಹಿತ್ ಶರ್ಮ ಅವರಿಗೆ ಸಲ್ಲುತ್ತದೆ. ಈ ಬಾರಿಯ ಐಪಿಎಲ್ ನಲ್ಲಿ ರೋಹಿತ್ ಶರ್ಮಾ ಅವರನ್ನು ನಾಯಕ ಸ್ಥಾನದಿಂದ ತೆಗೆದು ಹಾರ್ದಿಕ್ ಪಾಂಡ್ಯ ಅವರನ್ನು ನೇಮಕ ಮಾಡಲಾಯಿತು. ಆರಂಭದಲ್ಲಿ ರೋಹಿತ್ ಶರ್ಮ ಅಭಿಮಾನಿಗಳು ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಇವೆಲ್ಲವನ್ನ ಮರೆತು ಇದೀಗ ಹಾರ್ದಿಕ್ ಪಾಂಡ್ಯ ಅವರನ್ನ ಒಪ್ಪಿಕೊಂಡಿದ್ದಾರೆ.

Advertisement
Tags :
Advertisement