ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಆಡುವುದು ಡೌಟ್

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ ನಿಂದ ಹೊರಗುಳಿಯುವ ಸಾಧ್ಯತೆಯಿದೆ. ಪಾದದ ಗಾಯದಿಂದ ಬಳಲುತ್ತಿರುವ ಅವರು ಐಪಿಎಲ್ ಆರಂಭದ ವೇಳೆಗೆ ಫಿಟ್​ ಸಾಧಿಸುವುದು ಕಷ್ಟಕರ.
03:49 PM Dec 23, 2023 IST | Ramya Bolantoor

 ಮುಂಬೈ:  ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ ನಿಂದ ಹೊರಗುಳಿಯುವ ಸಾಧ್ಯತೆಯಿದೆ. ಪಾದದ ಗಾಯದಿಂದ ಬಳಲುತ್ತಿರುವ ಅವರು ಐಪಿಎಲ್ ಆರಂಭದ ವೇಳೆಗೆ ಫಿಟ್​ ಸಾಧಿಸುವುದು ಕಷ್ಟಕರ.

Advertisement

ಏಕದಿನ ವಿಶ್ವಕಪ್​ನಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಈ ಗಾಯವು ಗಂಭೀರವಾಗಿದ್ದ ಕಾರಣ ಅವರು ವಿಶ್ವಕಪ್​ನಿಂದ ಹೊರಗುಳಿದಿದ್ದರು.

ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಗಳಲ್ಲೂ ಆಡಲಿಲ್ಲ.
ಅಫ್ಘಾನಿಸ್ತಾನ್ ವಿರುದ್ಧ ನಡೆಯಲಿರುವ ಟಿ20 ಸರಣಿಯಿಂದಲೂ ಹಾರ್ದಿಕ್ ಪಾಂಡ್ಯ ಹೊರಗುಳಿಯುವುದು ಖಚಿತವಾಗಿದೆ. ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಲು 2 ರಿಂದ 3 ತಿಂಗಳು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

Advertisement

ಐಪಿಎಲ್ ಬೆನ್ನಲ್ಲೇ ಟಿ20 ವಿಶ್ವಕಪ್ ಕೂಡ ಶುರುವಾಗಲಿದೆ.ಹೀಗಾಗಿ ಐಪಿಎಲ್​ನಿಂದ ಹೊರಗುಳಿಯುವುದು ಖಚಿತ ಎಂದೇ ಹೇಳಬಹುದು.

Advertisement
Tags :
IPLLatestNewsNewsKannadasports
Advertisement
Next Article