ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೇಜ್ರಿವಾಲ್ ಮಧ್ಯಂತರ ಜಾಮೀನು ಕೋರಿ ಸಲ್ಲಿಸಲಾಗಿದ್ದ ಪಿಐಎಲ್‌ ತಿರಸ್ಕೃತ

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನುನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ನ್ನು ದೆಹಲಿ ಹೈಕೋರ್ಟ್‌ ಇಂದು ತಿರಸ್ಕರಿಸಿದೆ.
01:07 PM Apr 22, 2024 IST | Ashitha S

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನುನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ನ್ನು ದೆಹಲಿ ಹೈಕೋರ್ಟ್‌ ಇಂದು ತಿರಸ್ಕರಿಸಿದೆ.

Advertisement

ದೆಹಲಿ ಸಿಎಂ ಅವರ ಅಧಿಕಾರಾವಧಿ ಮುಗಿಯುವವರೆಗೆ ಅಥವಾ ಅವರ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಯುವವರೆಗೆ ಅವರಿಗೆ ಜಾಮೀನು ಒದಗಿಸಬೇಕೆಂದು ಅರ್ಜಿಯಲ್ಲಿ ವಿನಂತಿಸಲಾಗಿತ್ತು.

ಈ ಅರ್ಜಿಯನ್ನು ತಿರಸ್ಕರಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್‌ ಮತ್ತು ನ್ಯಾಯಮೂರ್ತಿ ಮನಮೀತ್‌ ಪ್ರೀತಂ ಸಿಂಗ್‌ ಅರೋರಾ ಅವರ ವಿಭಾಗೀಯ ಪೀಠ, ಅರ್ಜಿಯನ್ನು ಯಾವುದೇ ಆಧಾರವಿಲ್ಲದೆ ಸಲ್ಲಿಸಲಾಗಿದೆ.

Advertisement

ಪಿಐಎಲ್‌ ಸಲ್ಲಿಸಲು ಕೇಜ್ರಿವಾಲ್‌ ಅಧಿಕಾರ ನೀಡಿದ ಪವರ್‌ ಆಫ್‌ ಅಟಾರ್ನಿಯನ್ನು ಅರ್ಜಿದಾರರು ಹೊಂದಿಲ್ಲ ಎಂದು ಹೇಳಿದ ನ್ಯಾಯಾಲಯ ಅರ್ಜಿದಾರನಿಗೆ ರೂ 75,000 ವೆಚ್ಚಗಳನ್ನು ಪಾವತಿಸುವಂತೆ ಆದೇಶಿಸಿದೆ.

Advertisement
Tags :
AAPArvind KejriwalBAILBJPBreakingNewsCongressDelhi HCPILನವದೆಹಲಿ
Advertisement
Next Article