ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅಸ್ತು

ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.
12:11 PM Mar 22, 2024 IST | Ashitha S

ಬೆಂಗಳೂರು: ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.

Advertisement

ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ. ಅಲ್ಲದೆ, ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದೆ.

ಬೋರ್ಡ್ ಪರೀಕ್ಷೆ ನಡೆಸುವ ಕರ್ನಾಟಕ ಸರ್ಕಾರದ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಕೋರ್ಟ್ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಭಾಗೀಯ ಪೀಠದ ಆದೇಶಕ್ಕೆ ತಡೆ ನೀಡಿತ್ತು. ಅಲ್ಲದೆ, ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು.

Advertisement

ಅದರಂತೆ, ಇಂದು  ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಟ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದ್ದು, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿದೆ.

 

Advertisement
Tags :
GOVERNMENTindiaKARNATAKAKARNATAKA HIGH COURTKarnatakaStateCurriculumLatestNewsNewsKannadaಬೆಂಗಳೂರು
Advertisement
Next Article