ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮತದಾನ ಮಾಡಿದವರಿಗೆ ಹೋಟೆಲ್‌ಗಳಲ್ಲಿ ಉಚಿತ ಊಟ; ಹೈಕೋರ್ಟ್‌ ಅನುಮತಿ

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ಶುಕ್ರವಾರ ನಡೆಯಲಿದೆ. ಆ ದಿನ ಮತದಾನ ಮಾಡಿ ಅದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತೋರಿಸಿದವರಿಗೆ ಉಚಿತವಚವಾಗಿ ಆಹಾರ ನೀಡಲು ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್‌ನ ಸದಸ್ಯರಿಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.
01:08 PM Apr 24, 2024 IST | Ashitha S

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ಶುಕ್ರವಾರ ನಡೆಯಲಿದೆ. ಆ ದಿನ ಮತದಾನ ಮಾಡಿ ಅದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತೋರಿಸಿದವರಿಗೆ ಉಚಿತವಚವಾಗಿ ಆಹಾರ ನೀಡಲು ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್‌ನ ಸದಸ್ಯರಿಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.

Advertisement

ಈ ವಿಚಾರವಾಗಿ ಹೈಕೋರ್ಟ್​ ಮಂಗಳವಾರ ಮಧ್ಯಂತರ ಆದೇಶ ನೀಡಿದೆ. ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಬೆಂಗಳೂರಿನ ಕೆಲವು ಹೋಟೆಲ್​ಗಳು ಕಳೆದ ವರ್ಷ ವಿಧಾನಸಭೆ ಚುನಾವಣೆ ವೇಳೆಯೂ ಇದೇ ರೀತಿಯ ಪ್ರಯತ್ನ ಮಾಡಿದ್ದವು.

ಹೋಟೆಲ್​​ಗಳ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಧ್ಯಂತರ ಆದೇಶ ನೀಡಿದ್ದಾರೆ.

Advertisement

ಅರ್ಜಿದಾರರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಬಾರದು ಎಂಬ ಷರತ್ತಿನೊಂದಿಗೆ, ಅರ್ಜಿದಾರರ ಸಂಘ ಮತ್ತು ಅದರ ಸದಸ್ಯರು 2024 ರ ಏಪ್ರಿಲ್ 26, ರಂದು ಬೆಂಗಳೂರಿನಲ್ಲಿ ಮತದಾರರಿಗೆ ಉಚಿತ ಆಹಾರವನ್ನು ವಿತರಿಸಲು ಅನುಮತಿಸಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

 

Advertisement
Tags :
BJPCongressindiaKARNATAKALatestNewsNewsKarnatakaಬೆಂಗಳೂರು
Advertisement
Next Article