For the best experience, open
https://m.newskannada.com
on your mobile browser.
Advertisement

ರಾಜ್ಯ ಸರ್ಕಾರದ ಹುಕ್ಕಾ ಬಾರ್ ನಿಷೇಧ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲಾ ಬಗೆಯ ಹುಕ್ಕಾ ದಾಸ್ತಾನು, ಮಾರಾಟ, ಸೇವನೆ ಮತ್ತು ಜಾಹೀರಾತು ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.
01:27 PM Apr 23, 2024 IST | Ashitha S
ರಾಜ್ಯ ಸರ್ಕಾರದ ಹುಕ್ಕಾ ಬಾರ್ ನಿಷೇಧ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲಾ ಬಗೆಯ ಹುಕ್ಕಾ ದಾಸ್ತಾನು, ಮಾರಾಟ, ಸೇವನೆ ಮತ್ತು ಜಾಹೀರಾತು ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

Advertisement

ಹುಕ್ಕಾ ಬಾರ್‌ ನಿಷೇಧ ಪ್ರಶ್ನಿಸಿ ಬೆಂಗಳೂರಿನ ಆರ್‌. ಭರತ್‌ ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾ.ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ, ಸೋಮವಾರ ತೀರ್ಪು ಪ್ರಕಟಿಸಿತು. ಮಾರ್ಚ್‌ 11ರಂದು ನ್ಯಾಯಾಲಯವು ವಿಸ್ತೃತವಾಗಿ ವಾದ ಆಲಿಸಿ, ಆದೇಶ ಕಾಯ್ದಿರಿಸಿತ್ತು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಸುಮನ್‌ ಅವರು “ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ, ವಹಿವಾಟು, ಉತ್ಪಾದನೆ, ಪೂರೈಕೆ ಮತ್ತು ಹಂಚಿಕೆ ಕಾಯಿದೆ 2003 (ಸಿಒಟಿಪಿಎ) ಕೇಂದ್ರ ಸರ್ಕಾರದ ಕಾನೂನಾಗಿದ್ದು, ಇಲ್ಲಿ ಹುಕ್ಕಾ ನಿಷೇಧಕ್ಕೆ ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಆಹಾರ ಪೂರೈಸದ ನಿರ್ದಿಷ್ಟ ಸ್ಥಳಗಳಲ್ಲಿ ಹುಕ್ಕಾ ಸೇದಲು ಅವಕಾಶವಿದೆ” ಎಂದಿದ್ದರು.

Advertisement

ಇದಕ್ಕೆ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಸಿಒಟಿಪಿಎ ಸಿಗರೇಟುಗಳಿಗೆ ಸಂಬಂಧಿಸಿದ್ದು, ಹುಕ್ಕಾಗೂ ಇದಕ್ಕೂ ಸಂಬಂಧವಿಲ್ಲ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಹುಕ್ಕಾಗೆ ನಿಷೇಧ ವಿಧಿಸಲು ಸರ್ಕಾರಕ್ಕೆ ಅಧಿಕಾರವಿದೆ.

ಒಂದು ಹುಕ್ಕಾ ಸೇವನೆ 100 ಸಿಗರೇಟುಗಳ ಸೇವನೆಗೆ ಸಮ.ಸಂವಿಧಾನದ 47ನೇ ವಿಧಿಯ ಅನ್ವಯ ಸಾರ್ವಜನಿಕ ಆರೋಗ್ಯ ಸುಧಾರಿಸಲು ರಾಜ್ಯ ಸರ್ಕಾರ ಕ್ರಮಕೈಗೊಳ್ಳುವ ಹೊಣೆಗಾರಿಕೆ ಹೊಂದಿದೆ ಎಂದಿದ್ದರು.

ಇದಕ್ಕೆ ಧ್ವನಿಗೂಡಿಸಿದ ಹಿರಿಯ ವಕೀಲ ಕಿರಣ್‌ ಜವಳಿ ಅವರು “ತಂಬಾಕು ಉತ್ಪನ್ನ ಬಳಸದ ಹರ್ಬಲ್‌ ಹುಕ್ಕಾ ಸೇದಲು ನಿಷೇಧ ಹೇರಬಾರದು” ಎಂದು ಹೇಳಿದ್ದರು. ಹುಕ್ಕಾ, ತಂಬಾಕು ಅಥವಾ ನಿಕೋಟಿನ್‌ ಒಳಗೊಂಡ ನಿಕೋಟಿನ್‌ ರಹಿತ, ತಂಬಾಕು ರಹಿತ, ಸ್ವಾದಭರಿತ, ಸ್ವಾದರಹಿತ ಹುಕ್ಕಾ ಹಾಗೂ ಇದೇ ಮಾದರಿಯ ಇನ್ನಿತರ ಹೆಸರುಗಳಿಂದ ಕರೆಯಲ್ಪಡುವ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಪ್ರಚೋದನೆ, ಸಂಗ್ರಹಣೆ, ವ್ಯಾಪಾರವನ್ನು ರಾಜ್ಯದಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

Advertisement
Tags :
Advertisement