ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲೈಂಗಿಕ ದೌರ್ಜನ್ಯ ಕೇಸ್; ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ ರೇವಣ್ಣ

ಪ್ರಜ್ವಲ್ ರೇವಣ್ಣ ಮತ್ತು ಎಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎಸ್ಐಟಿಯ ತನಿಖೆ ವೇಗಪಡೆದುಕೊಂಡಿದೆ.
05:32 PM May 02, 2024 IST | Ashitha S

ಬೆಂಗಳೂರು: ಪ್ರಜ್ವಲ್ ರೇವಣ್ಣ ಮತ್ತು ಎಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎಸ್ಐಟಿಯ ತನಿಖೆ ವೇಗಪಡೆದುಕೊಂಡಿದೆ.

Advertisement

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ ಅವರು ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ.

ಹಾಸನ ಜಿಲ್ಲೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್​ ಡಿ.ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ಎಸ್​ಐಟಿ ಈಗಾಗಲೇ ಈ ಪ್ರಕರಣ ತನಿಖೆಯನ್ನು ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿ ಕಲೆಹಾಕುತ್ತಿದೆ. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಮತ್ತು ಪ್ರಜ್ವಲ್​ಗೆ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ರೇವಣ್ಣ ಕೋರ್ಟ್​ ಮೆಟ್ಟಿಲೇರಿರುವುದು ಕುತೂಹಲ ಮೂಡಿಸಿದೆ.

Advertisement

Advertisement
Tags :
crimeGOVERNMENTindiaKARNATAKANewsKarnatakaಬೆಂಗಳೂರು
Advertisement
Next Article