For the best experience, open
https://m.newskannada.com
on your mobile browser.
Advertisement

4 ದಿನ ಎಸ್‌ಐಟಿ ಕಸ್ಟಡಿಗೆ ಹೆಚ್‌.ಡಿ.ರೇವಣ್ಣ: ನ್ಯಾಯಾಲಯ ಆದೇಶ

ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರನ್ನು 4 ದಿನ ಎಸ್‌ಐಟಿ  ವಶಕ್ಕೆ ನೀಡಿ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
09:22 PM May 05, 2024 IST | Ashika S
4 ದಿನ ಎಸ್‌ಐಟಿ ಕಸ್ಟಡಿಗೆ ಹೆಚ್‌ ಡಿ ರೇವಣ್ಣ  ನ್ಯಾಯಾಲಯ ಆದೇಶ

ಬೆಂಗಳೂರು:  ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರನ್ನು 4 ದಿನ ಎಸ್‌ಐಟಿ  ವಶಕ್ಕೆ ನೀಡಿ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

Advertisement

ನೋಟಿಸ್‌ ನೀಡಿದರೂ ವಿಚಾರಣೆಗೆ ಗೈರಾಗಿದ್ದ ರೇವಣ್ಣ ಅವರನ್ನು ಎಸ್‌ಐಟಿ ತಂಡ ನಿನ್ನೆ ದೇವೇಗೌಡರ ನಿವಾಸದಲ್ಲಿ ಬಂಧಿಸಿತ್ತು.

ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಪ್ರಕರಣದ ವಾದ-ಪ್ರತಿವಾದವನ್ನು ಆಲಿಸಿದ ಕೋರ್ಟ್‌ ನ್ಯಾಯಾಧೀಶರು, ರೇವಣ್ಣರನ್ನು ಎಸ್‌ಐಟಿ ವಶಕ್ಕೆ ಒಪ್ಪಿಸಿದೆ.

Advertisement

ರೇವಣ್ಣರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಎಸ್‌ಐಟಿ ತಂಡ ಕಸ್ಟಡಿಗೆ ನೀಡುವಂತೆ ಕೇಳಿಕೊಂಡಿತು. ಇದಕ್ಕೆ ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯ್ಕ್‌ ಆಕ್ಷೇಪ ವ್ಯಕ್ತಪಡಿಸಿದರು. ಜಾಮೀನು ನೀಡುವಂತೆ ಮನವಿ ಮಾಡಿದರು. ಸಂತ್ರಸ್ತೆ ಸಿಕ್ಕಿದ್ದಾರೆ. ರೇವಣ್ಣಗೂ ಅಪಹರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವಕೀಲರು ವಾದ ಮಂಡಿಸಿದರು.

ಮಾಜಿ ಸಚಿವರ ವಿರುದ್ಧ ಸುಮಾರು 15 ಕ್ಕೂ ಹೆಚ್ಚು ಅಂಶಗಳನ್ನು ಉಲ್ಲೇಖಿಸಿ ಎಸ್‌ಐಟಿ 5 ದಿನ ಕಸ್ಟಡಿಗೆ ಕೇಳಿತು. ಈ ವೇಳೆ ಹೆಚ್‌.ಡಿ.ರೇವಣ್ಣ, ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನನ್ನು ರಾಜಕೀಯವಾಗಿ ಮುಗಿಸುವ ಯತ್ನ ಮಾಡಿದ್ದಾರೆ. ರಾಜಕೀಯ ವಿರೋಧಿಗಳ ಷಡ್ಯಂತ್ರ ಎಂದು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರು.

Advertisement
Tags :
Advertisement