ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದಲ್ಲಿ ನಾಲ್ಕು ದಿನ ಉಷ್ಣ ಅಲೆ; ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮತ್ತೆ ತಾಪಮಾನ ಹೆಚ್ಚಳವಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಉಷ್ಣ ಅಲೆ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
10:19 AM Apr 30, 2024 IST | Ashitha S

ಬೆಂಗಳೂರು: ರಾಜ್ಯದಲ್ಲಿ ಮತ್ತೆ ತಾಪಮಾನ ಹೆಚ್ಚಳವಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಉಷ್ಣ ಅಲೆ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Advertisement

ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಉಷ್ಣ ಅಲೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಲಿದೆ.

ಕಲಬುರ್ಗಿ, ಬೀದರ್, ವಿಜಯಪುರ, ಬೆಳಗಾವಿ, ಗದಗ, ಹಾವೇರಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕಬಳ್ಳಾಪುರ, ಮಂಡ್ಯ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳವರೆಗೆ ಕಲಬುರ್ಗಿ, ಬಾಗಲಕೋಟೆ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ವಾತಾವರಣವಿರಲಿದೆ. ಹಾಗಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Advertisement

ಕರಾವಳಿ ಪ್ರದೇಶಗಳು, ವಿಶೇಷವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಕೂಡ ಹೆಚ್ಚುತ್ತಿರುವ ತಾಪಮಾನದ ಪರಿಣಾಮವನ್ನು ಅನುಭವಿಸುವ ಮುನ್ಸೂಚನೆ ನೀಡಲಾಗಿದೆ.

Advertisement
Tags :
GOVERNMENTindiaKARNATAKALatestNewsNewsKarnataka
Advertisement
Next Article