For the best experience, open
https://m.newskannada.com
on your mobile browser.
Advertisement

ಉಡುಪಿಯಲ್ಲಿ ಧಾರಾಕಾರ ಮಳೆ: ಹಲವು ಮನೆಗಳು ಜಲಾವೃತ, ಕೃತಕ ನೆರೆ

ಎರಡು ದಿನಗಳಿಂದ ಸುರಿಯುತ್ತಿರುವ ರಣಮಳೆಗೆ ಉಡುಪಿ ನಗರ ತತ್ತರಿಸಿ ಹೋಗಿದೆ. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಹಲವೆಡೆ ಮನೆಗಳು ಜಲಾವೃತಗೊಂಡಿದೆ.
12:23 PM Jul 08, 2024 IST | Ashitha S
ಉಡುಪಿಯಲ್ಲಿ ಧಾರಾಕಾರ ಮಳೆ  ಹಲವು ಮನೆಗಳು ಜಲಾವೃತ  ಕೃತಕ ನೆರೆ

ಉಡುಪಿ: ಎರಡು ದಿನಗಳಿಂದ ಸುರಿಯುತ್ತಿರುವ ರಣಮಳೆಗೆ ಉಡುಪಿ ನಗರ ತತ್ತರಿಸಿ ಹೋಗಿದೆ. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಹಲವೆಡೆ ಮನೆಗಳು ಜಲಾವೃತಗೊಂಡಿದೆ. ಉಡುಪಿಯ ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

Advertisement

ಕರಂಬಳ್ಳಿ ಭಾಗದಲ್ಲಿ, ಬನ್ನಂಜೆ ಮೂಡನಿಡಂಬೂರು ಕೆಲವು ಮನೆಗಳು ಜಲಾವೃತಗೊಂಡಿವೆ. ಇಂದ್ರಾಣಿ ನದಿ ಹರಿಯುವ ಪಾತ್ರದಲ್ಲಿ ಗುಂಡಿಬೈಲು ಭಾಗದಲ್ಲಿ ತೋಟ, ಗದ್ದೆಗಳು ಜಲಾವೃತಗೊಂಡಿದೆ.
Screenshot 2024 07 08 122340

ಕರಂಬಳ್ಳಿ ವೆಂಕಟರಮಣ ಲೇಔಟ್‌ನ ಹಲವು ಮನೆಗಳು ಜಲಾವೃತಗೊಂಡಿರುವ ಬಗ್ಗೆ ವರದಿಯಾಗಿದೆ. ಭಾರಿ ಮಳೆಯಿಂದ ನಗರದಲ್ಲಿನ ಮಳೆನೀರು ತೋಡು ತುಂಬಿ ಹರಿಯುತ್ತಿದ್ದು, ಇದರಿಂದ ಈ ಪರಿಸರದ ಹತ್ತಾರು ಮನೆಗಳು ಜಲಾವೃತಗೊಳ್ಳುವ ಆತಂಕ ಎದುರಾಗಿದೆ.
Screenshot 2024 07 08 122333

Advertisement

ಹಲವೆಡೆ ಮಕ್ಕಳು ಶಾಲೆಗೆ ತೆರಳಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಕೂಡ ಜಲಾವೃತ ಗೊಂಡಿರುವುದರಿಂದ ವಾಹನ ಸಂಚಾರಕ್ಕೂ ಅಡ್ಡಿಯಾಗುತ್ತಿದೆ.

Advertisement
Tags :
Advertisement